ವಸತಿ ನಿಲಯಗಳಿಗೆ ಪ್ರವೇಶ ಆರಂಭ

VV DIGITAL
Published on

ಗದಗ: ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಸತಿ ನಿಲಯಗಳಿಗೆ 2025- 26ನೇ ಸಾಲಿನಲ್ಲಿ ಖಾಲಿ ಇರುವ ಸ್ಥಳಗಳಿಗೆ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಇತರ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವೇಶ ಬಯಸುವವರು ವೈಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಕಚೇರಿ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net