

ಮದ್ದೂರು: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಮೈಗೂಡಿಸಿಕೊಂಡರೆ ಬದುಕು ಹಸನಾಗುತ್ತದೆ ಎಂದು ಕೊಪ್ಪ ಯಂಬಾರ್ಜಿಯರ್ ಮಠದ ಅಧ್ಯಕ್ಷ ಕುಮಾರ್ ಕೊಪ್ಪ ತಿಳಿಸಿದರು.
ತಾಲೂಕಿನ ಕೊಪ್ಪದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಬದುಕಿನದ್ದಕ್ಕೂ ಹಲವು ಕಷ್ಟಗಳನ್ನು ಅನುಭವಿಸಿ ದೇಶಕ್ಕೆ ಅದ್ಭುತವಾದ ಸಂವಿಧಾನ ನೀಡಿದರು. ಇದರಿಂದ ಎಲ್ಲರೂ ಸಮಾನತೆಯಿಂದ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.
ಕೆಎಸ್‌ಆರ್‌ಟಿಸಿ ಸಂಚಾರ ನಿಯಂತ್ರಕ ಜಯದೇವ, ಯಂಬಾರ್ಜಿಯರ್ ಮಠದ ಕಾರ್ಯದರ್ಶಿ ಕೆ.ಜಿ.ಶ್ರೀನಿವಾಸ್, ಡಾ.ಬಿ.ಆರ್. ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆ.ಎಚ್.ಶ್ರೀನಿವಾಸ್, ಮುಖಂಡರಾದ ನಾಗರಾಜು, ಕೃಷ್ಣ, ಚಂದ್ರ, ನಾಗರಾಜು, ಶಿವರುದ್ರ, ಬೋರಪ್ಪ, ವಿನು, ತಮ್ಮಣ್ಣ ಇತರರಿದ್ದರು.