ಮಕ್ಕಳ ಪಾಲನಾ ಸಂಸ್ಥೆಗಳನ್ನು ದತ್ತು ಸ್ವೀಕರಿಸಿ : ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್

Bagadi gautha
Published on

ಮೈಸೂರು: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳ ದತ್ತು ಸ್ವೀಕಾರಕ್ಕೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ವಿವಿಧ ಕಂಪನಿಗಳಿಂದ ಅರ್ಜಿ ಆಹ್ವಾನಿಸಿದ್ದಾರೆ.

ಕಾರ್ಪೋರೇಟ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ಫಂಡ್ (ಕಾರ್ಪಸ್ ಫಂಡ್)ನಲ್ಲಿ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ವಿವಿಧ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಈ ದತ್ತು ಸ್ವೀಕಾರ ಯೋಜನೆಯ ಉದ್ದೇಶವಾಗಿದೆ. ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ದಾಖಲಾಗಿರುವ ಮಕ್ಕಳ ಸಂಪೂರ್ಣ ವ್ಯಕ್ತಿತ್ವವನ್ನು ರೂಪುಗೊಳಿಸಲು, ವಿಕಸನಗೊಳಿಸಲು ಹಾಗೂ ಅವರ ಮುಂದಿನ ಜೀವನದಲ್ಲಿ ಮಹತ್ತರ ಬದಲಾವಣೆ ತರಲು ಅವಶ್ಯಕವಾದ ಸೌಲಭ್ಯಗಳನ್ನು ಒದಗಿಸಬೇಕಾಗಿದೆ.

ಕಟ್ಟಡ ದುರಸ್ತಿ, ಹೊಸ ಕೊಠಡಿಗಳ ನಿರ್ಮಾಣ, ಕ್ರೀಡಾಂಗಣ ನಿರ್ಮಾಣ, ಕ್ರೀಡಾ ಸಾಮಗ್ರಿಗಳು, ಸಂಗೀತ ಸಲಕರಣೆಗಳು, ಮಕ್ಕಳ ಇತರೆ ಚಟುವಟಿಕೆಗಳಿಗಾಗಿ ಸಂಗೀತ, ನೃತ್ಯ, ಯೋಗ, ಕ್ರೀಡೆ, ಮಾರ್ಷಲ್ ಆರ್ಟ್ಸ್‌ಗೆ ಬೇಕಾದ ಸೌಲಭ್ಯಗಳನ್ನು ಒದಗಿಸಬೇಕಾಗಿದೆ. ಅಲ್ಲದೆ ಶೈಕ್ಷಣಿಕ ವಿಷಯಗಳ ಶಿಕ್ಷಕರು ಹಾಗೂ ಮಾನವ ಸಂಪನ್ಮೂಲ ಸೇವೆಯನ್ನು ಪಡೆಯಲು ಈ ದತ್ತು ಯೋಜನೆ ನೆರವಾಗಲಿದೆ.

ಮಾಹಿತಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಿ.ಎ. ನಂ.15-17, ಅಂಜನಾದ್ರಿ ಮುಖ್ಯ ರಸ್ತೆ, ವಿಜಯನಗರ 4ನೇ ಹಂತ, 2ನೇ ಹಂತ, ಮೈಸೂರು (ದೂ:0821-2543003) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net