ತತ್ವ ಸಿದ್ಧಾಂತ ಅಳವಡಿಸಿಕೊಳ್ಳಿ

ತತ್ವ ಸಿದ್ಧಾಂತ ಅಳವಡಿಸಿಕೊಳ್ಳಿ
Published on

ಶನಿವಾರಸಂತೆ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 133ನೇ ಜನ್ಮ ದಿನಾಚರಣೆಯನ್ನು ಅಂಬೇಡ್ಕರ್ ಅಭಿಮಾನಿಗಳ ಸಂಘದ ವತಿಯಿಂದ ಭಾನುವಾರ ಆಚರಿಸಲಾಯಿತು.

ಪಟ್ಟಣದ ಕೆಆರ್‌ಸಿ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶನಿವಾರಸಂತೆ ವಿಘ್ನೇಶ್ವರ ಬಾಲಕಿಯರ ವಿದ್ಯಾಸಂಸ್ಥೆಯ ಶಿಕ್ಷಕ ಕೆ.ಪಿ.ಜಯಕುಮಾರ್ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ದೇಶ ಮತ್ತು ವಿದೇಶದಲ್ಲೂ ಮಾದರಿಯಾಗಿದ್ದಾರೆ. ಅವರ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದರು.

ತಾ.ಪಂ. ಮಾಜಿ ಸದಸ್ಯ ಜಿ.ಆರ್.ಪಾಲಾಕ್ಷ ಮಾತನಾಡಿದರು. ದುಂಡಳ್ಳಿ ಗ್ರಾ.ಪಂ.ಸದಸ್ಯ ಸಿ.ಜೆ.ಗಿರೀಶ್, ಪ್ರಮುಖರಾದ ಎನ್.ಕೆ.ಅಪ್ಪಸ್ವಾಮಿ, ಅಬ್ಬಾಸ್, ಮಹೇಶ್, ಜನಾರ್ಧನ್, ವೀರೇಂದ್ರ, ರಾಮಕುಮಾರ್, ಪುಟ್ಟಸ್ವಾಮಿ, ನಿವೃತ್ತ ಸೈನಿಕ ಯಶ್ವಂತ್, ಅಶೋಕ್, ಗೋಪಾಲ್, ಗಂಗಾಧರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net