ಶರಣರ ಚಿಂತನೆಗಳನ್ನು ಅಳವಡಿಸಿಕೊಳ್ಳಿ

27arsph1ep
Published on

ಅರಸೀಕೆರೆ: ಮಾನವೀಯ ಮೌಲ್ಯಗಳ ಪ್ರತಿಪಾದನೆ ಶರಣ ಮೊದಲ ಆದ್ಯತೆಯಾಗಿತ್ತು ಎಂದು ಪ್ರೌಢಶಾಲೆ ನಿವೃತ್ತ ಮುಖ್ಯಶಿಕ್ಷಕ ಕೆ.ಸಿ. ನಟರಾಜು ಹೇಳಿದರು.


ತಾಲೂಕು ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನಗರದ ಕೋಡಿಮಠ ಬಸವೇಶ್ವರ ಪ್ರೌಢಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಅವರ ದತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪನ್ಯಾಸ ನೀಡಿದರು. 12ನೇ ಶತಮಾನದ ಬಸವಾದಿ ಶಿವಶರಣರು ಕಾಯಕ, ದಾಸೋಹ ಚಿಂತನೆಗೆ ಒತ್ತು ನೀಡಿದ್ದರು. ಇದಕ್ಕೆ ಪೂರಕ ಎನ್ನುವಂತೆ ವೃತ್ತಿಯನ್ನಾಧರಿಸಿ ಅನುಭವ ಮಂಟಪ ಸ್ಥಾಪಿಸಿ ಮೇಲು, ಕೀಳು, ಬಡವ, ಬಲ್ಲಿದ ಎಂಬ ತಾರತಮ್ಯವಿಲ್ಲದಂತೆ ಸಮಾಜದ ಒಳಿತಿಗೆ ತೊಡಗಿಸಿಕೊಂಡಿದ್ದು ನಮಗೆಲ್ಲರಿಗೂ ಆದರ್ಶಪ್ರಾಯರಾಗಿದ್ದಾರೆ ಎಂದರು.
ಸಾಮಾಜಿಕ ಸಮಾನತೆ ಜತೆಗೆ ಅಜ್ಞಾನದ ಕತ್ತಲು ಕಳೆಯುವ ಕೆಲಸ ಮಾಡಿರುವ ಶರಣ ಶ್ರೇಷ್ಠ ಸಂಸ್ಕೃತಿಯನ್ನು ಜಗತ್ತಿನ ಜನರಿಗೆ ಪರಿಚಯಿಸುವ ಉದ್ದೇಶದಿಂದ ದತ್ತಿ ಉಪನ್ಯಾಸಗಳನ್ನು ಆಯೋಜಿಸುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿಗಳು ಗುರು, ಹಿರಿಯರನ್ನು ಗೌರವಿಸುವ ಜತೆಗೆ ಮಾನವೀಯ ಮೌಲ್ಯಗಳು ಹಾಗೂ ಶರಣರ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.


ಚಿಕ್ಕೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕ ಗಂಗಾಧರಸ್ವಾಮಿ ಮಾತನಾಡಿ, ಸತತ ಪರಿಶ್ರಮ ಹಾಗೂ ಶ್ರದ್ಧೆಯಿಂದ ಕಲಿಕೆಯಲ್ಲಿ ತೊಡಗಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದರು.


ಕೋಡಿಮಠ ಪದವಿಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಡಾ.ಬಿ.ಡಿ.ಕುಮಾರ್ ಶರಣರು ಹಾಗೂ ವಚನ ಪರಂಪರೆ ಮಹತ್ವ ಕುರಿತು ಮಾತನಾಡಿದರು. ಬಸವೇಶ್ವರ ಪ್ರೌಢಶಾಲೆಯ ಮುಖ್ಯಶಿಕ್ಷಕ ಎಂ.ವಿ.ಸುರೇಶ್, ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ ಮಾತನಾಡಿದರು.
ಹಸಿರು ಪರಿಸರ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಎ.ಎಲ್.ಮೋಹನ್ ಕುಮಾರ್, ಎಚ್.ಡಿ.ಸೀತಾರಾಂ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಪ್ರಸನ್ನಕುಮಾರ್, ರುದ್ರೇಶ್ ಬಾಬು, ಪ್ರಧಾನ ಕಾರ್ಯದರ್ಶಿ ಡಾ.ಹರೀಶ್ ಕುಮಾರ್, ತಾಲೂಕು ಕಸಾಪ ನಿಕಟಪೂರ್ವ ಗೌರವ ಕಾರ್ಯದರ್ಶಿ ಕೆ.ಎಸ್.ಮಂಜುನಾಥ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಘವೇಂದ್ರ, ಹರಿಪ್ರಸಾದ್ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net