

ಹಾಸನ: ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯನಿರ್ವಹಿಸುತ್ತಿರುವ ನಗರದ ಎಚ್‌ಕೆಎಸ್ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಇತ್ತೀಚೆಗೆ ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಬಿ.ಗಣನಾಥ್ ಶೆಟ್ಟಿ ಮಾತನಾಡಿ, ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆಯ ಅಂಗವಾಗಿ ಶಿಕ್ಷಕರ ದಿನ ಆಚರಿಸುತ್ತಿದ್ದೇವೆ. ರಾಧಾಕೃಷ್ಣನ್ ಅವರ ಸಾಧನೆ, ಆದರ್ಶ ಗುಣ, ವ್ಯಕ್ತಿತ್ವವನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಶಿಕ್ಷಣದ ಪ್ರಾಮುಖ್ಯತೆ ಮತ್ತು ಮಹತ್ವವನ್ನು ಅರಿತು ವಿದ್ಯಾರ್ಥಿಗಳು ಜೀವನ ಮೌಲ್ಯ ಅಳವಡಿಸಿಕೊಳ್ಳಬೇಕೆಂದರು.
ಸಹ ಸಂಸ್ಥಾಪಕ ಜಿ.ವಿಮಲ್‌ರಾಜ್ ಮಾತನಾಡಿ, ಶಿಕ್ಷಣ ಕೇವಲ ಅಂಕ ಗಳಿಕೆಗೆ ಸೀಮಿತವಾದುದಲ್ಲ. ಶಿಕ್ಷಣ ಜೀವನ ಮೌಲ್ಯ ರೂಪಿಸುವಂತಾಗಲಿ ಎಂದರು.
ವಿದ್ವಾನ್ ಗಣಪತಿ ಭಟ್ ಮಾತನಾಡಿ, ಭಾರತೀಯ ಪರಂಪರೆಯಲ್ಲಿ ಗುರು-ಶಿಷ್ಯರ ಸಂಬಂಧ ಅತ್ಯುತ್ತಮವಾದದ್ದು, ವಿದ್ಯಾರ್ಥಿಗಳ ತಪ್ಪುಗಳನ್ನು ತಿದ್ದಿ ಸರಿದಾರಿಗೆ ತರುವ ಜವಾಬ್ದಾರಿ ಶಿಕ್ಷಕರ ಮೇಲಿರುತ್ತದೆ ಎಂದರು.
ಎಚ್‌ಕೆಎಸ್ ಅಂತಾರಾಷ್ಟ್ರೀಯ ಶಾಲೆಯ ಪ್ರಾಂಶುಪಾಲರಾದ ಡಾ. ಎ.ಎಸ್.ಗೌರಿ, ಕಾಲೇಜಿನ ಪ್ರಾಂಶುಪಾಲ ಎ.ಪ್ರವೀಣ್ ಮಾತನಾಡಿದರು.
ಕ್ರಿಯೇಟಿವ್ ಗುರುದೇವೋಭವ ಕಾರ್ಯಕ್ರಮದ ಪ್ರಯುಕ್ತ ಹಾಸನ ಸರ್ಕಾರಿ ಪದವಿ ಪೂರ್ವ ಕಾಲೇಜು (ವಿಭಜಿತ) ಪ್ರಾಂಶುಪಾಲ ಎ.ಗಣಪತಿ, ಹಾಸನ ಎಚ್‌ಕೆಎಸ್ ಅಂತಾರಾಷ್ಟ್ರೀಯ ಶಾಲೆ ಗಣಿತ ಶಿಕ್ಷಕ ನವಾಜ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಸಿ.ಎಲ್.ಅಶ್ವಿನಿ, ಕನ್ನಡ ವಿಭಾಗದ ಮುಖ್ಯಸ್ಥ ಎಂ.ರಮೇಶ್ ಅವರನ್ನು ಸನ್ಮಾನಿಸಲಾಯಿತು.
ಉಪ ಪ್ರಾಂಶುಪಾಲ ಆದಿತ್ಯ ವಟಿ, ಕನ್ನಡ ಉಪನ್ಯಾಸಕ ಲೋಕೇಶ್ ಪೂಜಾರಿ, ಕೆ. ಗಣೇಶ ಕೆ ಭಟ್, ವನ್ಯಶ್ರೀ, ಬೋಧಕ, ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.