ಬಾಹುಬಲಿ ಆದರ್ಶಗಳ ಅಳವಡಿಸಿಕೊಳ್ಳಿ

15SBG1 (3)
ಗೊಮ್ಮಟ ನಗರದ ಎಸ್.ಎನ್.ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿಗಳ ಬಳಗದವರು ಭಾನುವಾರ ಆಯೋಜಿಸಿದ್ದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಡಾ.ಎಚ್.ಎನ್.ವಿಶ್ವನಾಥ್ ಉದ್ಘಾಟಿಸಿದರು. ಡಾ.ಯುವರಾಜ್, ಬಬನ್ ಪಿ,ಡಿ, ಡಾ.ಎಸ್.ದಿನೇಶ್ ಇದ್ದರು.
Published on

ಶ್ರವಣಬೆಳಗೊಳ: ಶಾಂತಿ ಸರಳತೆ ಮತ್ತು ತ್ಯಾಗದ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ್ ಚೇತನ ಬಾಹುಬಲಿ. ಇಂತಹ ವ್ಯಕ್ತಿಯ ಆದರ್ಶಗಳ ಮೈಗೂಡಿಸಿಕೊಂಡು ಪರಿಪೂರ್ಣ ಜೀವನ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ಶಾರದಾ ವಿಲಾಸ ಶಿಕ್ಷಣ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ.ಎಚ್.ಎನ್.ವಿಶ್ವನಾಥ್ ಹೇಳಿದರು.

ಗೊಮ್ಮಟ ನಗರದ ಎಸ್.ಎನ್.ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವದ ಅಂಗವಾಗಿ ಸ್ನೇಹಲೋಕ ಹಿರಿಯ ವಿದ್ಯಾರ್ಥಿಗಳ ಬಳಗದವರು ಭಾನುವಾರ ಆಯೋಜಿಸಿದ್ದ ಗುರುವಂದನಾ ಮತ್ತು ಸ್ನೇಹ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣ ಪಡೆಯುವ ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗೂ ಏಕಾಗ್ರತೆ ಅವಶ್ಯಕ. ವಿದ್ಯಾರ್ಥಿಗಳು ಸಮಯವನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು ಎಂದು ತಿಳಿಸಿದರು.

ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಯುವರಾಜ್, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಬಬನ್ ಪಿ.ದತ್ತವಾಡೆ, ಪ್ರಾಂಶುಪಾಲ ಡಾ.ಎಸ್.ದಿನೇಶ್ ಮಾತನಾಡಿದರು. ಸ್ನೇಹಲೋಕ ಹಿರಿಯ ವಿದ್ಯಾರ್ಥಿಗಳ ಬಳಗದವರು 30 ವರ್ಷಗಳಿಂದ ಸೇವೆ ಸಲ್ಲಿಸಿದ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ-ಕಿರಿಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರ ನೆರವೇರಿತು. ಗ್ರಾಮ ಪಂಚಾಯಿತಿಯ ಅಧ್ಯಕ್ಷ ಅಫ್ತಾಬ್ ಪಾಷಾ

, ಎಂ.ಸಿ.ವಿಜಯಕುಮಾರ, ಹರ್ಷಕುಮಾರ್. ಅಭಿಷೇಕಗೌಡ, ಪದ್ಮಶ್ರೀ, ವೀಣಾ, ವಾಣಿ, ದರ್ಶನ್, ಶ್ರವಣ್ ಹಾಗೂ ಪದಾಧಿಕಾರಿಗಳು ಹಾಗೂ ಉಪನ್ಯಾಸಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net