ಮಹರ್ಷಿಗಳ ಆದರ್ಶ ಅಳವಡಿಸಿಕೊಳ್ಳಿ

ಸೋಮವಾರಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಧರ್ಮಪ್ಪ, ಕೃಷ್ಣಮೂರ್ತಿ, ಜಯಂತಿ ಇದ್ದರು.
ಸೋಮವಾರಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಧರ್ಮಪ್ಪ, ಕೃಷ್ಣಮೂರ್ತಿ, ಜಯಂತಿ ಇದ್ದರು.
Published on

ಸೋಮವಾರಪೇಟೆ: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಕೊಡಗು ಜಿಲ್ಲಾ ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘಗಳ ಸಹಯೋಗಯದಲ್ಲಿ ಇಲ್ಲಿನ ತಾಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು.

ಮುಖ್ಯ ಭಾಷಣಕಾರ ಚಿಕ್ಕ ಅಳುವಾರ ಜ್ಞಾನ ಕಾವೇರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕ ಕೆ.ಕೆ. ಧರ್ಮಪ್ಪ ಮಾತನಾಡಿ, ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಮಹಾಗ್ರಂಥವಾಗಿದೆ. 2 ಸಾವಿರ ವರ್ಷಗಳ ಹಿಂದೆ ರಚಿತವಾಗಿದೆ ಎನ್ನಲಾಗಿದ್ದು, ಸದುದ್ಧೇಶದಿಂದ ರಚಿಸಲಾದ ಮಹಾಗ್ರಂಥ ರಾಮಾಯಣ ಎಲ್ಲರಿಗೂ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೃಷ್ಣಮೂರ್ತಿ ಮಾತನಾಡಿ, ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಗ್ರಂಥದ ಮೂಲಕ ಸಮಾಜಕ್ಕೆ ನೀಡಿರುವ ಸಂದೇಶವನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕಿದೆ. ಮಹರ್ಷಿಗಳ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಮುಂದಿನ ಸಾಲಿನಿಂದ ವಾಲ್ಮೀಕಿ ಜಯಂತಿಯನ್ನು ಸಮೀಪದ ಹಾಡಿಗಳಲ್ಲಿ ಆಚರಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಜಯಂತಿ ಶಿವಕುಮಾರ್, ಉಪಾಧ್ಯಕ್ಷೆ ಎಸ್.ಇ. ಮೋಹಿನಿ, ಸದಸ್ಯೆ ಶೀಲಾ ಡಿಸೋಜ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆ.ಎ. ಆದಮ್, ತಾಲ್ಲೂಕು ಪಂಚಾಯಿತಿ ಇಒ ಪರಮೇಶ ಕುಮಾರ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೃಷ್ಣಪ್ರಸಾದ್, ಆರ್‌ಎಫ್‌ಒ ಶೈಲೇಂದ್ರಕುಮಾರ್, ಕೆಡಿಪಿ ಸದಸ್ಯರಾದ ವೇದಕುಮಾರ್, ಔರಂಗಜೇಬ್, ಪರಿಶಿಷ್ಟ ಪಂಗಡಸ ಮುಖಂಡ ಕುಮಾರಸ್ವಾಮಿ, ದಲಿತ ಮುಖಂಡರಾದ ಬಿ.ಈ.ಜಯೇಂದ್ರ, ನಿರ್ವಾಣಪ್ಪ, ಹೊನ್ನಪ್ಪ, ಈರಪ್ಪ ಸೇರಿದಂತೆ ಹಲವರು ಇದ್ದರು.

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಆಲೂರು-ಸಿದ್ಧಾಪುರ ಶಾಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯಾರ್ಥಿ ಕೃಷ್ಣಮೂರ್ತಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಕ್ಯಾತೆ ಗ್ರಾಮದ ಎಪಿಜೆ ಅಬ್ದುಲ್ ಕಲಾಂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವಿನೋದ್ ಅವರನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net