ಸಂವಿಧಾನದ ವಿಚಾರಧಾರೆ ಅಳವಡಿಸಿಕೊಳ್ಳಿ

15sep-1-nmt-sam,samvidhana-news-photo
Published on

ನ್ಯಾಮತಿ: ಯುವ ಪೀಳಿಗೆ ಸಂವಿಧಾನದ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಸದೃಢ ಭಾರತ ನಿರ್ಮಾಣಕ್ಕೆ ಕಂಕಣಬದ್ಧರಾಗಬೇಕು ಎಂದು ತಹಸೀಲ್ದಾರ್ ಎಚ್.ಬಿ.ಗೋವಿಂದಪ್ಪ ಹೇಳಿದರು.
ಪಟ್ಟಣದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ಸಂವಿಧಾನದ ಪೀಠಿಕೆ ಓದು ದಿನಾಚರಣೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಪಂಚದಲ್ಲೇ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶ ನಮ್ಮ ಭಾರತ. ಇತರೆ ದೇಶಗಳಿಗೆ ಮಾದರಿಯಾಗಿದೆ. ಸಂವಿಧಾನದ ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಓದಬೇಕು. ಅರಿಯಬೇಕು ಅದಕ್ಕೆ ಬದ್ಧರಾಗಿ ನಡೆದಲ್ಲಿ ಸಂವಿಧನದ ಆಶಯ ಈಡೇರಿದಂತಾಗಲಿದೆ ಎಂದರು.
ಉಪನ್ಯಾಸಕರಾದ ಸಂಗಪ್ಪ ಔರಸಂಗ, ಡಾ.ಅಮೃತ್.ಬಿ. ಪ್ರತಿಜ್ಞಾವಿಧಿ ಬೋಧಿಸಿದರು. 800ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಎಲ್ಲ ಶಾಲಾ, ಕಾಲೇಜಿನ ಅಧ್ಯಾಪಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ, ವಿವಿಧ ಇಲಾಖೆಯ ಸಿಬ್ಬಂದಿ, ಸಂಘ, ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದು ಸ್ವೀಕರಿಸಿದರು.
ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಗಣ್ಯರು ಪುಷ್ವಾರ್ಚನೆ ನೆರವೇರಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಮೃತ್ಯುಂಜಯ ಸ್ವಾಮಿ, ಸೀಮಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕುಮಾರ್ ಬಾರ್ಕಿ, ನ್ಯಾಮತಿ ಠಾಣೆಯ ಪಿ.ಐ ಎನ್.ಡಿ.ರವಿ, ಪಿಎಸ್‌ಐ ಜಯಪ್ಪನಾಯ್ಕ, ಪಪಂ ಮುಖ್ಯಾಧಿಕಾರಿ ಪಿ.ಗಣೇಶ್ ರಾವ್, ಪ್ರಾಚಾರ್ಯರಾದ ವಿ.ಪಿ.ಪೂರ್ಣಾನಂದ, ಬಿ.ಆನಂದ್, ಭೀಮಕುಮಾರ್, ಉಪನ್ಯಾಸಕರಾದ ಗಂಗಾಧರ್ ನವಲೆ , ಮುಖ್ಯಶಿಕ್ಷಕ ಸಿದ್ದಪ್ಪ ಜಿಗಣಪ್ಪರ್ , ಕಂದಾಯ ಇಲಾಖೆಯ ಸಂತೋಷ್, ಗಣೇಶ್ ಗೌಡ್ರು, ಸುಧೀರ್ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net