ಜೀವನ ಮೌಲ್ಯ ಅಳವಡಿಸಿಕೊಳ್ಳಿ

Adopt the value of life.
ವಿಜಯಪುರದ ಎಸ್‌ಬಿಜೆ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬೀಳ್ಕೊಡುವ ಸಮಾರಂಭವನ್ನು ಗಣ್ಯರು ಉದ್ಘಾಟಿಸಿದರು. ಡಾ. ಮಾಧವ ಗುಟಿ, ಜಿ.ಜೆ. ಹತ್ತಳ್ಳಿ, ಡಿ.ಎಸ್. ಪೂಜಾರಿ ಮತ್ತಿತರರಿದ್ದಾರೆ.
Published on

ವಿಜಯಪುರ : ಯುವ ಜನತೆ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಮಾಧವ ಗುಡಿ ಹೇಳಿದರು.

ನಗರದ ಮಾರ್ಗದರ್ಶಿ ಸಮೂಹ ಸಂಸ್ಥೆಯ ಎಸ್‌ಬಿಜೆ ಕಲಾ ಹಾಗೂ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಬಿಎ ಹಾಗೂ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿಗಳ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಬೀಳ್ಕೊಡುವ ಸಮಾರಂಭದಲ್ಲಿ ಮಾತನಾಡಿದ ಅವರು, ಯುವ ಜನತೆ ಜವಾಬ್ದಾರಿ ಹೊಂದಬೇಕು. ಅಲ್ಲದೆ, ಸ್ವಸಾಮರ್ಥ್ಯ ಬೆಳೆಸಿಕೊಳ್ಳುವುದರ ಮೂಲಕ ಸಮಸ್ಯೆಗಳಿಗೆ ಮೂಲ ಪರಿಹಾರ ಕಂಡುಕೊಳ್ಳುವ ಶಿಕ್ಷಣ ಪಡೆಯುವಂತಾಗಬೇಕು ಎಂದು ಸಲಹೆ ನೀಡಿದರು.

ಅತಿಥಿ ವಿಶ್ವನಾಥ ತೆನಿಹಳ್ಳಿ ಮಾತನಾಡಿ, ವಿದ್ಯಾರ್ಥಿಗಳು ಪದವಿಯೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಗಮನಹರಿಸಿ ಪದವಿ ಮುಗಿಯುವುದರೊಂದಿಗೆ ಸರ್ಕಾರಿ ಹುದ್ದೆ ಹೊಂದುವಂತರಾಗಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ಜಿ.ಜೆ. ಹತ್ತಳ್ಳಿ ಮಾತನಾಡಿದರು. ಡಿ.ಎಸ್. ಪೂಜಾರಿ ಪ್ರಾರ್ಥಿಸಿ ಸ್ವಾಗತಿಸಿದರು. ವಿ.ಎನ್. ನಾಯಕ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಡಾ. ವಿ.ಎನ್. ಕೆಂಗನಾಳ ವಾರ್ಷಿಕ ವರದಿ ವಾಚಿಸಿದರು. ಪರಮೇಶ್ವರ ರೊಟ್ಟಿ ಪ್ರಮಾಣ ಪತ್ರ ವಿತರಿಸಿದರು. ಪೂಜಾ ಸಿಂಗೆ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net