ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಿ

29 vikram 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಉಉತ್ಕೃಷ್ಟತೆ ಸಾಧಿಸಲು ಪ್ರಯತ್ನಿಸಬೇಕು. ಸಮಾಜದ ಸೌಕರ್ಯಕ್ಕಾಗಿ ವೃತ್ತಿಪರ ಮತ್ತು ವೈಯಕ್ತಿಕ ಜೀವನದಲ್ಲಿ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ನಗರದ ಎಸ್​ಡಿಎಂ ಇಂಜಿನಿಯರಿಂಗ್​ ಕಾಲೇಜಿನಲ್ಲಿ ಏರ್ಪಡಿಸಿದ್ದ 2024-25ನೇ ಬ್ಯಾಚ್​ನ ಯುಜಿ ಮತ್ತು ಪಿಜಿ ಕಾರ್ಯಕ್ರಮಗಳಿಗೆ ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಸರಿಯಾದ ಮೌಲ್ಯಗಳೊಂದಿಗೆ ಬೆಳೆದ ವ್ಯಕ್ತಿ ಸರಿಯಾದ ಶಿಕ್ಷಣ ಪಡೆದಿದ್ದಾನೆ ಎಂದು ಭಾವಿಸಬಹುದು. ತಾಂತ್ರಿಕ ವಿದ್ಯಾರ್ಥಿಗಳು ವಿಶೇಷವಾಗಿ ತಂತ್ರಜ್ಞಾನದಲ್ಲಿ ಪ್ರಗತಿ ಕಾಣಲು ಕಾರ್ಯದಲ್ಲಿ ವೇಗ ಹೊಂದಿರಬೇಕು. ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸರಿಯಾದ ಆಹಾರ ಪದ್ಧತಿಗೆ ಒತ್ತು ನೀಡಬೇಕು ಎಂದರು.

ಸಂಸ್ಥೆ ಕಾರ್ಯದರ್ಶಿ ಜೀವಂಧರಕುಮಾರ, 2024-25ನೇ ಸಾಲಿನ 800 ವಿದ್ಯಾರ್ಥಿಗಳು, ಅಧ್ಯಾಪಕರು, ಸಿಬ್ಬಂದಿ, ಇತರರು ಇದ್ದರು.

ಕಾಲೇಜಿನ ಪ್ರಾಚಾರ್ಯ ಡಾ.ರಮೇಶ ಚಕ್ರಸಾಲಿ ಸ್ವಾಗತಿಸಿದರು. ಪ್ರೊ. ವಾಸುದೇವ ಪರ್ವತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net