ಪ್ರೌಢ ಶಾಲೆ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ

Untitled design
ತಾವರಗೇರಾ ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪ್ರೌಢ ಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿಯವರಿಗೆ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
Published on

ತಾವರಗೇರಾ: ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪ್ರೌಢ ಶಾಲೆಯ ಶಿಕ್ಷಕ ಪ್ರಕಾಶ ಎಸ್ ಮಳಗಿಯವರಿಗೆ ಕರ್ನಾಟಕ ರಾಜ್ಯ ಅನುದಾನಿತ ಶಿಕ್ಷಕರ ಸಂಘದಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಲಭಿಸಿದೆ.

ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು, ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ರಾಜ್ಯ ಸಮಾವೇಶ ಹಾಗೂ ಶೈಕ್ಷಣಿಕ ಕಾರ್ಯಗಾರ ಕಾರ್ಯಕ್ರಮದಲ್ಲಿ ಶಿಕ್ಷಕ ಪ್ರಕಾಶ ಎಸ್ ಮಳಗಿಯವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಶ್ರೀನಿರ್ಮಾನಂದ ಸ್ವಾಮಿ, ಸಾರಿಗೆ ಮತ್ತು ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರಡ್ಡಿ, ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ ಗುಂಡುರಾವ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net