ಜಂಕ್ ಫುಡ್‌ಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ

8 Dwd 4
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಂಕ್ ಫುಡ್‌ಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತವೆ. ಮನೆಗಳಲ್ಲಿ ತಯಾರಿಸುವ ಸಾಂಪ್ರದಾಯಿಕ ಆಹಾರ ಸೇವನೆಯಿಂದ ಆರೋಗ್ಯವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳಬಹುದು. ಒಳ್ಳೆಯ ಆಹಾರ ಮಾನಸಿಕ ಮತ್ತು ದೈಹಿಕ ಸದೃಢತೆಯನ್ನು ಹೆಚ್ಚಿಸುತ್ತದೆ ಎಂದು ದಾವಣಗೆರೆ ವಿಶ್ವವಿದ್ಯಾಲಯದ ಆಹಾರ ಮತ್ತು ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಸದಾಶಿವ ಎಸ್.ಒ ಹೇಳಿದರು.

ನಗರದ ಲಿಂಗಾಯತ ವಿದ್ಯಾಭಿವೃದ್ಧಿ ಸಂಸ್ಥೆಯ ಕನ್ನಡ ಪ್ರೌಢಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ 2024- 25ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.

ಮನೆಯ ಆಹಾರ ಸೇವನೆಯಿಂದ ಆಸ್ಪತ್ರೆಯ ಖರ್ಚುಗಳನ್ನು ತಪ್ಪಿಸಬಹುದು. ಉತ್ತಮ ಆರೋಗ್ಯಕ್ಕಾಗಿ ಏಕದಾನ್ಯ ಮತ್ತು ದ್ವಿದಾನ್ಯಗಳ ಸೇವನೆ ಅತ್ಯಂತ ಸಹಕಾರಿ ಎಂದರು.

ಪದವಿ ಕಾಲೇಜಿನ ವಿಶ್ರಾಂತ ಪ್ರಾಚಾರ್ಯ ಎಸ್.ಸಿ. ಹಿರೇಮಠ ಮಾತನಾಡಿ, ವಿದ್ಯಾರ್ಥಿಗಳು ಶಿಷ್ಯವೇತನದ ಸದುಪಯೋಗ ಪಡೆದು ಬಲಶಾಲಿ ಭಾರತ ನಿರ್ಮಾಣಕ್ಕೆ ಬೆನ್ನೆಲುಬಾಗಿ ನಿಲ್ಲಬೇಕು ಎಂದರು.

ಸAಸ್ಥೆಯ ಗೌರವ ಕಾರ್ಯದರ್ಶಿ ಚಂದ್ರಕಾ0ತ ಮಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಾಧ್ಯಾಪಕಿ ಭುವನೇಶ್ವರಿ ದಂಡಿನ ವಾರ್ಷಿಕ ವರದಿ ಮಂಡಿಸಿದರು. ಸಾವಿತ್ರಿ ಪಾಟೀಲ ನಿರೂಪಿಸಿದರು. ಮಂಜುಳಾ ಬಾವಿಹಾಳ ನಿರ್ವಹಿಸಿದರು.

ಶಿವಲಿಂಗ ನೀಲಗುಂದ, ಮಹಾಂತೇಶ ಕ್ವಾಟಿ, ರಾಘವೇಂದ್ರ ಗುಡೆಣ್ಣವರ, ಸೋಮಶೇಖರ ಕರಡಿಗುಡ್ಡ, ಮೃತ್ಯುಂಜಯ ಅಮರಗೋಳ ಇತರರಿದ್ದರು. ಪ್ರತಿಭಾವಂತ ವಿದ್ಯಾರ್ಥಿಗಳು, ಕ್ರೀಡಾ ಸಾಧಕರಿಗೆ ನಗದು ಬಹುಮಾನ ನೀಡಿ ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net