

ಹುಬ್ಬಳ್ಳಿ: ನಗರದ ನೆಹರು ಮೈದಾನದಲ್ಲಿ ಇತ್ತೀಚೆಗೆ ಡಾ.ಆರ್.ಬಿ. ಪಾಟೀಲ ಮಹೇಶ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವು ಯಶಸ್ವಿಯಾಗಿ ಜರುಗಿತು.
ಕಾಲೇಜಿನ ಶೈಕ್ಷಣಿಕ ಮುಖ್ಯಸ್ಥ ರಿಯಾಜ್ ಬಸರಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿಷಯಗಳಿಗೆ ಮಾತ್ರವಲ್ಲದೇ ವಿವಿಧ ಕ್ರೀಡೆ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡು ಸುಂದರ ಭವಿಷ್ಯ ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪಠ್ಯವಲ್ಲದೇ ಪಠ್ಯೇತರ ಚಟುವಟಿಕೆಗಳಿಗೂ ಆದ್ಯತೆ ನೀಡಬೇಕೆಂದು ತಿಳಿವಳಿಕೆ ನೀಡಿದರು.
ಡಾ.ಆರ್.ಬಿ. ಪಾಟೀಲ್ ಮಹೇಶ ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭದಿಂದಲೂ ಕೇವಲ ಶೈಕ್ಷಣಿಕ ಸಾಧನೆ ಮಾತ್ರವಲ್ಲದೇ ವಿವಿಧ ಕ್ರೀಡೆ, ಸಾಂಸ್ಕೃತಿಕ ಚಟುಟಿಕೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಸಾಧನೆ ಮಾಡಿದ್ದಾರೆ ಎಂದರು.
ಉಪಪ್ರಾಚಾರ್ಯ ರಮೇಶ ಹೊಂಬಾಳೆ ಇತರರು ಇದ್ದರು.
ದೈಹಿಕ ಶಿಕ್ಷಣ ನಿರ್ದೇಶಕ ಐ.ಎಸ್. ಹಿರೇಮಠ ಸ್ವಾಗತಿಸಿದರು. ಇಂಗಿಷ್ ವಿಭಾಗದ ಮುಖ್ಯಸ್ಥ ನೀಲ್ ಪ್ರತಾಪನ್ ನಿರೂಪಿಸಿದರು. ಕ್ರೀಡಾ ವಿಭಾಗದ ಸದಸ್ಯ ವಿನಾಯಕ ಶಿರೂರ ವಂದಿಸಿದರು.