ಗರ್ಭಿಣಿಯರು ಪೌಷ್ಠಿಕ ಆಹಾರ ಸೇವಿಸಲು ಸಲಹೆ

Advice for pregnant women to eat nutritious food
Published on

ಕುಶಾಲನಗರ:

ಇಲ್ಲಿನ ಅಂಬೇಡ್ಕರ್ ಕಾಲೋನಿಯಲ್ಲಿ ಇರುವ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ, ಪೋಷಣ್ ಮಾಸಾಚರಣೆ ಹಾಗೂ ಅರೋಗ್ಯ ಮೇಳ ಮಂಗಳವಾರ ನಡೆಯಿತು. ಈ ಸಂದರ್ಭ ಮುಖ್ಯ ಅತಿಥಿಯಾಗಿದ್ದ ಕುಶಾಲನಗರ ಪುರಸಭೆ ಸದಸ್ಯೆ ರೇಣುಕಾ ಜಗದೀಶ್ ಮಾತನಾಡಿ, ಗರ್ಭಿಣಿಯರು ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ ಹಮ್ಮಿಕೊಂಡಿರುವ ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಸಾರ್ವಜನಿಕರಿಗೆ ಪೂರಕವಾಗಿವೆ.

ಗರ್ಭಿಣಿಯರು ಪೌಷ್ಠಿಕ ಆಹಾರಗಳನ್ನು ಹೆಚ್ಚಾಗಿ ಬಳಕೆ ಮಾಡುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು. ಸಮಾಜದ ಸ್ವಾಸ್ಥ್ಯಕ್ಕೆ ಆಶಾ ಕಾರ್ಯಕರ್ತರು ಹಾಗೂ ವೈದ್ಯ ಸಿಬ್ಬಂದಿ ಸೇವೆ ಶ್ಲಾಘನೀಯವಾದುದು ಎಂದರು.

ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದೀಪಿಕಾ ಮೂರ್ತಿ, ಸಮುದಾಯ ಆರೋಗ್ಯ ನಿರೀಕ್ಷಕಿ ದೀಪಾ, ತಾಲೂಕು ಪೋಷಣ ಅಭಿಯಾನದ ಸಂಯೋಜಕಿ ಚಂದ್ರಿಕಾ, ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ, ನಂದಿನಿ, ಹೆಚ್.ವಿ. ರೂಪಾ, ಲತಾ, ಅಂಗನವಾಡಿ ಸಹಾಯಕಿ ಭಾಗ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net