ರಫ್ತು ವ್ಯವಹಾರದಲ್ಲಿ ಯಶಸ್ವಿಯಾಗಲು ಸಲಹೆ

h4-kcci
Published on

ಹುಬ್ಬಳ್ಳಿ: ಇಲ್ಲಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಲ್ಲಿ ಏರ್ಪಡಿಸಿದ್ದ 6 ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಇತ್ತೀಚೆಗೆ ಜರುಗಿತು.
ವಿಟಿಪಿಸಿಯ ಸಹಾಯಕ ನಿರ್ದೇಶಕ ಟಿ.ಎಸ್. ಮಲ್ಲಿಕಾರ್ಜುನ ಮಾತನಾಡಿ, ತಾವು ನಿರೀಕ್ಷೆ ಮಾಡಿರುವ ರಫ್ತು ವ್ಯವಹಾರದಲ್ಲಿ ಯಶಸ್ವಿಯಾಗಬೇಕು. ವಿಟಿಪಿಸಿ ಸಂಸ್ಥೆ ವತಿಯಿಂದ ರಫ್ತು ವ್ಯಾಪಾರ ಸುಗಮಗೊಳಿಸಲು ಸಹಕರಿಸಲಾಗುವುದು ಎಂದರು.
ಕೆಸಿಸಿಐ ಅಧ್ಯಕ್ಷ ಎಸ್.ಪಿ. ಸಂಶಿಮಠ ಮಾತನಾಡಿ, 6ದಿನಗಳ ರಫ್ತು ನಿರ್ವಹಣಾ ತರಬೇತಿ ಕಾರ್ಯಕ್ರಮವು ಯಶಸ್ವಿಯಾಗಿದೆ. ಇಂತಹ ಕಾರ್ಯಕ್ರಮಗಳನ್ನು ಹೆಚ್ಚಾಗಿ ಏರ್ಪಡಿಸಬೇಕು. ಕಳೆದ 3-4 ವರ್ಷಗಳಿಂದ ಇಂತಹ ರಫ್ತಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಸುಧೀರ ಚಿತ್ರಗಾರ ಮಾತನಾಡಿ, ಇಂತಹ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವ ವಿಟಿಪಿಸಿ ಸಂಸ್ಥೆಯನ್ನು ಅಭಿನಂದಿಸಿದರು.
ವೈಜನಾಥ ಚೌಗಲಾ, ದಸ್ತಗಿರಿಬಾಷಾ ಮಕಾನದಾರ, ಪ್ರಶಾಂತ ಆಚಾರಿ ಹಾಗೂ ಪ್ರಕಾಶ ಹೆಬ್ಬಳ್ಳಿ ಸೇರಿ ಇತರರು ಅಭಿಪ್ರಾಯ ಹಂಚಿಕೊಂಡರು.
ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಸಂಸ್ಥೆಯ ಗೌರವ ಕಾರ್ಯದರ್ಶಿಗಳಾದ ರವೀಂದ್ರ ಬಳಿಗಾರ, ಮಹೇಂದ್ರ ಸಿಂಘಿ, ಸದಸ್ಯ ಸಿದ್ದೇಶ್ವರ ಕಮ್ಮಾರ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net