ಕಾವೇರಿ ನೀರು ಹರಿಸಲು ಕಾನೂನು ತಜ್ಞರ ಸಲಹೆ; ಕಾರಣವೇನು?

Kaveri (3)
Published on

ಬೆಂಗಳೂರು: ರೈತರ ತೀವ್ರ ಪ್ರತಿರೋಧದ ನಡುವೆ ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಹರಿಸುವ ವಿಚಾರದಲ್ಲಿ ಸರ್ಕಾರ ಯಾವ ಹೆಜ್ಜೆ ಇಡುತ್ತದೆ ಎಂಬ ಕುತೂಹಲದ ನಡುವೆ ಕಳೆದ ಎರಡು ದಿನಗಳಲ್ಲಿ ನೀರು ಹರಿಸಯುವಿಕೆ ನಿರಾತಂಕವಾಗಿ ಮುಂದುವರಿದಿದೆ. ಮೂರು ದಿನಗಳ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಕಾವೇರಿ ನಿರ್ವಹಣಾ ಮಂಡಳಿ ಸೂಚನೆಯಂತೆ ಸೆ.13ರಿಂದ ಪ್ರತಿ ನಿತ್ಯ ಐದು ಸಾವಿರ ಕ್ಯೂಸೆಕ್ ನೀಡು ಬಿಡುಗಡೆ ಮಾಡದೇ ಇರುವ ನಿರ್ಧಾರಕ್ಕೆ ಬರಲಾಗಿತ್ತು. ನೀರು ಬಿಡುಗಡೆ ಮಾಡಬೇಕೇ ಬೇಡವೇ ಎಂದು ಕಾನೂನು ತಜ್ಞರ ಸಲಹೆಯಂತೆ ನಡೆದುಕೊಳ್ಳುವುದಾಗಿ ತಿಳಿಸಿತ್ತು.

ಎರಡು ದಿನ ನೀರು ಹರಿಸಿ

ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿಕುಮಾರ್, ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ ಸಲ್ಲಿಸುವ ಮೊದಲು ಎರಡು ದಿನ ನೀರು ಹರಿಸಿ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ ಎಂದು ಹೇಳಿದರು.

ನಾವು ನೀರು ಬಿಡುವುದಿಲ್ಲ ಎಂದು ಹೇಳಿದ್ದೆವು. ಆದರೆ ಸುಪ್ರೀಂ ಕೋರ್ಟಿನ ಮುಂದೆ ಹೋದಾಗ ಆದೇಶ ಪಾಲನೆ ಮಾಡಲಾಗಿದೆಯೇ ಎಂದು ಪರಿಶೀಲಿಸಲಾಗುತ್ತದೆ. ಪಾಲನೆ ಮಾಡದೆ ಇದ್ದ ಸಂದರ್ಭದಲ್ಲಿ ತೊಂದರೆಯಾಗುತ್ತದೆ ಎನ್ನುವ ಅಭಿಪ್ರಾಯ ಬಂದಿದೆ ಎಂದು ತಿಳಿಸಿದರು.

ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net