

ನರೇಗಲ್ಲ: ಡೆಂಘ ಸೊಳ್ಳೆಗಳಿಂದ ಹರಡುವ ವೈರಲ್ ರೋಗವಾಗಿದೆ. ಇದು ತೀವ್ರವಾದ ಜ್ವರ, ತಲೆನೋವು, ಸ್ನಾಯು ಮತ್ತು ಕೀಲು ನೋವು, ವಾಕರಿಕೆ ಮತ್ತು ದದ್ದುಗಳಂತಹ ಲಕ್ಷಣಗಳನ್ನು ಉಂಟು ಮಾಡುತ್ತದೆ ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಕೆ.ಎ. ಬೂದಿಹಾಳ ಹೇಳಿದರು.
ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಡೆಂಘೆ ವಿರೋಧಿ ಮಾಸಾಚರಣೆಯಲ್ಲಿ ಅವರು ಮಾತನಾಡಿದರು.
ಆರೋಗ್ಯ ನಿರೀಕ್ಷಣಾಧಿಕಾರಿ ಮಂಜುನಾಥ ಜಾಲಿಹಾಳ ಮಾತನಾಡಿ, ಡೆಂಘೆ ಜ್ವರ ತಡೆಗಟ್ಟಲು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ನಿಯಂತ್ರಿಸುವುದು ಮತ್ತು ಸೊಳ್ಳೆಗಳ ಕಡಿತವನ್ನು ತಪ್ಪಿಸುವುದು ಮುಖ್ಯ. ಮನೆಯ ಸುತ್ತಲಿನ ನೀರಿನ ತೊಟ್ಟಿಗಳು, ಹೂ ಕುಂಡಗಳು ಮತ್ತು ಇತರ ಪಾತ್ರೆಗಳನ್ನು ಸ್ವಚ್ಛವಾಗಿಡುವುದು. ಟೈರ್ಗಳು ಮತ್ತು ಇತರ ತ್ಯಾಜ್ಯ ವಸ್ತುಗಳನ್ನು ತೆಗೆದುಹಾಕುವುದು. ಮನೆಯ ಸುತ್ತಲೂ ಸೊಳ್ಳೆ ಪರದೆಗಳನ್ನು ಬಳಸುವುದು. ಸೊಳ್ಳೆ ನಿವಾರಕಗಳನ್ನು ಬಳಸುವ ಮೂಲಕ ಡೆಂಘೆ ಜ್ವರದಿಂದ ಪಾರಾಗಬಹುದು ಎಂದರು.
ಪ್ರಾಚಾರ್ಯ ಎಸ್.ಸಿ. ಗುಳಗಣ್ಣವರ ಅಧ್ಯಕ್ಷತೆ ವಹಿಸಿದ್ದರು. ರಹಮತಬಾನು ಶರಭತ್ವಾಲಾ, ಸಿಬ್ಬಂದಿ ಇದ್ದರು.