

ವಿಜಯವಾಣಿ ಸುದ್ದಿಜಾಲ ಧಾರವಾಡ
ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜಮೀನಿನಲ್ಲಿ ನಿಂತ ನೀರನ್ನು ಬಸಿಗಾಲುವೆ ಮಾಡಿ ಹೊರಹಾಕಬೇಕು ಎಂದು ಕೃಷಿ ವಿಜ್ಞಾನಿಗಳು ರೈತರಿಗೆ ಸಲಹೆ ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯದ ವಿಜ್ಞಾನಿಗಳು, ಕೃಷಿ ಇಲಾಖೆ ಅಽಕಾರಿಗಳು ತಾಲೂಕಿನ ಅಮ್ಮಿನಭಾವಿ ಹೋಬಳಿಯ ಗ್ರಾಮಗಳಿಗೆ ಗುರುವಾರ ಭೇಟಿ ನೀಡಿ ರೈತರಿಗೆ ಮಾರ್ಗದರ್ಶನ ನೀಡಿದರು.
ತಗ್ಗು ಪ್ರದೇಶದಲ್ಲಿ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿದ್ದರೆ 13.0:45 ಗೊಬ್ಬರವನ್ನು ಪ್ರತಿ ಲೀಟರ್ಗೆ 5 ಗ್ರಾಂ ಬೆರೆಸಿ ಬೆಳೆಗೆ ಸಿಂಪಡಿಸಬೇಕು. ಹೆಸರು, ಉದ್ದಿನ ಬೆಳೆಗಳಲ್ಲಿ ನಂಜು ರೋಗ ಕಂಡುಬAದರೆ ಆರಂಭಿಕ ಹಂತದಲ್ಲೇ ಸಸಿಗಳನ್ನು ಕಿತ್ತು ಮಣ್ಣಿನಲ್ಲಿ ಹೂಳಬೇಕು ಎಂದು ರೈತರಿಗೆ ಸಲಹೆ ನೀಡಿದರು.
ಕೃಷಿ ವಿಶ್ವವಿದ್ಯಾಲಯದ ಕೀಟಶಾಸ್ತçಜ್ಞ ಡಾ. ಎಸ್.ಎನ್. ಜಾಧವ, ಮಣ್ಣು ವಿಜ್ಞಾನಿ ಡಾ. ಪಲ್ಲವಿ, ಸಹಾಯಕ ಕೃಷಿ ನಿರ್ದೇಶಕ ರಾಜಶೇಖರ ಅಣಗೌಡರ, ಕೃಷಿ ಅಽಕಾರಿ ರೇಖಾ ಬೆಳ್ಳಟ್ಟಿ, ಕೃಷಿಕ ಸಮಾಜದ ಅಧ್ಯಕ್ಷ ಬಸವರಾಜ ಕುಂದಗೋಳ, ಇತರರಿದ್ದರು.