ನರೇಗಾದಡಿ ಉದ್ಯೋಗ ಪಡೆದುಕೊಳ್ಳುವಂತೆ ಸಲಹೆ

20 HANUR 4
ಕಾನ್‌ಮಳೆ ದೊಡ್ಡಿಯಲ್ಲಿ ನರೇಗಾ ಯೋಜನೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು. ಗೋವಿಂದಪ್ಪ, ಮಹೇಶ್ ಇತರರು ಇದ್ದರು.
Published on

ಹನೂರು: ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸುವ ಮೂಲಕ ನರೇಗಾ ಯೋಜನೆಯಡಿ ಉದ್ಯೋಗ ಪಡೆದುಕೊಳ್ಳುವಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಪ್ಪ ಸಲಹೆ ನೀಡಿದರು.

ಗ್ರಾಪಂ ವ್ಯಾಪ್ತಿಯ ಗುರುಮಲ್ಲಪ್ಪನ ದೊಡ್ಡಿ ಹಾಗೂ ಕಾನ್‌ಮಳೆ ದೊಡ್ಡಿ ಗಿರಿಜನರ ಹಾಡಿಗಳಿಗೆ ಶುಕ್ರವಾರ ಭೇಟಿ ನೀಡಿ ನರೇಗಾ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಮಾತನಾಡಿದರು. ನರೇಗಾ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಇದರಲ್ಲಿ ಪ್ರತಿ ಕುಟುಂಬವೂ 100 ದಿನ ಉದ್ಯೋಗ ಪಡೆಯಬಹುದಾಗಿದ್ದು, 370 ರೂ ಕೂಲಿ ಸಿಗಲಿದೆ. ಈ ಯೋಜನೆಯಡಿ ದನದ ಕೊಟ್ಟಿಗೆ, ಜಮೀನು, ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ, ಕೆರೆ, ಕಾಲುವೆ ಅಭಿವೃದ್ಧಿ ಸೇರಿದಂತೆ ಇತರ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ. ಆದರೆ ಗಿರಿಜನರು ಈ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಈ ಬಗ್ಗೆ ಮನದಟ್ಟು ಮಾಡಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು. ಸಮಸ್ಯೆಗಳಿದ್ದರೆ ಗ್ರಾಪಂ ಗಮನಕ್ಕೆ ತರಬೇಕು. ಬಳಿಕ ಪರಿಹಾರಕ್ಕೆ ಅಗತ್ಯ ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಸಂಯೋಜಕ ಮಹೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net