

ಉಡುಪಿ : ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿರುವ ವಕೀಲ ಕೃಷ್ಣಮೂರ್ತಿ ಅವರು ಕಳೆದ ಬುಧವಾರ ರಾತ್ರಿ ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಬರುತ್ತಿದ್ದಾಗ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು, ದಾಳಿಯ ಹಿಂದೆ ಪಿ.ಎಫ್.ಐ ಅಥವಾ ನಕ್ಸಲ್ ಕೈವಾಡವಿರುವ ಬಗ್ಗೆ ತನಿಖೆ ನಡೆಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎನ್. ಇವರಿಗೆ ಮನವಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿ ಉಡುಪಿ ಜಿಲ್ಲಾ ಸಮನ್ವಯಕಾರ ವಿಜಯ ಕುಮಾರ್, ಉದ್ಯಮಿ ಆನಂದ ಅಮೀನ್, ರಾಘವೇಂದ್ರ ಶೆಟ್ಟಿ, ರಾಮಣ್ಣ, ಹರಿಪ್ರಸಾದ್, ಕಟಪಾಡಿ ಕಾಳಿಕಾಂಬಾ ದೇವಸ್ಥಾನದ ರಮೇಶ ಆಚಾರ್ಯ, ನಿವೃತ್ತ ಬ್ಯಾಂಕ್ ಉದ್ಯೋಗಿ ಪದ್ಮನಾಭ ಶೆಣೈ, ಯುವ ಶಕ್ತಿ ಸಂಘಟನೆಯ ರಂಜನ್ ಮಲ್ಪೆ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.