ವಕೀಲರ ರಕ್ಷಣಾ ಕಾಯ್ದೆ ಜಾರಿಯಾಗಲಿ

05-01-Shiva-2
Published on

ರಾಯಚೂರು: ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಸ್ಥಳೀಯ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಿಲ್ಲಾ ವಕೀಲರ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ ಡಿಸಿ ಕಚೇರಿ ಕೇಂದ್ರ ಸ್ಥಾನಿಕ ಅಧಿಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಲಾಯಿತು.

ಇತ್ತೀಚೆಗೆ ದೇಶ ಮತ್ತು ರಾಜ್ಯದಲ್ಲಿ ವಕೀಲರ ಮೇಲೆ ಹಲ್ಲೆ ಪ್ರಕರಣ ಹೆಚ್ಚುತ್ತಿದ್ದರಿಂದ ಭೀತಿಯಿಂದ ಕೆಲಸ ನಿರ್ವಹಿಸುವಂತಾಗಿದೆ. ಕಕ್ಷಿದಾರರಿಗೆ ಕಾನೂನು ಬದ್ಧ ಹಕ್ಕುಗಳನ್ನು ಒದಗಿಸಲು ಹೋರಾಡುವ ನಮಗೆ ರಕ್ಷಣೆಯೇ ಇಲ್ಲದಂತಾಗಿದೆ. ಬೆಳಗಾವಿ ಅಧಿವೇಶನದಲ್ಲಿ ವಕೀಲರ ರಕ್ಷಣೆ ಮಸೂದೆ ಮಂಡಿಸಿ ಅನುಮೋದನೆ ಪಡೆಯುವಂತೆ ರಾಜ್ಯ ವಕೀಲರ ಪರಿಷತ್ ಸರ್ಕಾರವನ್ನು ಒತ್ತಾಯಿಸಿತ್ತು. ಆದರೆ ಕಾಯ್ದೆ ಮಂಡನೆ ಮಾಡಲಾಗಿಲ್ಲ. ಕೂಡಲೇ ಕಾಯ್ದೆ ಜಾರಿಗೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net