

ವಿಟ್ಲ: ಅಡ್ಯನಡ್ಕ ಜನತಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶಾಲಾ ಸಂಚಾಲಕಿ ಡಾ.ಅಶ್ವಿನಿ ಕೃಷ್ಣಮೂರ್ತಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಿತು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಸರಬರಾಜು ಮಾಡಲಾದ ಉಚಿತ ಪಠ್ಯಪುಸ್ತಕ ವಿದ್ಯಾರ್ಥಿಗಳಿಗೆ ಹಸ್ತಾಂತರಿಸಲಾಯಿತು. ಶಾಲೆಯನ್ನು ತಳಿರು ತೋರಣಗಳು, ಬಣ್ಣ ಬಣ್ಣದ ಬಲೂನ್‌ಗಳಿಂದ ಅಲಂಕರಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಸಿಹಿತಿಂಡಿ ವಿತರಿಸಲಾಯಿತು. ಮಧ್ಯಾಹ್ನ ಬಿಸಿಯೂಟದೊಂದಿಗೆ ಪಾಯಸದ ಔತಣ ವಿದ್ಯಾರ್ಥಿಗಳಿಗೆ ಉಣಬಡಿಸಲಾಯಿತು.
ಆಡಳಿತ ಮಂಡಳಿ ಸದಸ್ಯರಾದ ಜಯಾನಂದ ಉಳಯ, ಎ. ಗೋವಿಂದರಾಯ ಶೆಣೈ, ಕೆ.ಸದಾಶಿವ ಹೊಳ್ಳ ಉಪಸ್ಥಿತರಿದ್ದರು.
ಮುಖ್ಯಶಿಕ್ಷಕ ಟಿ.ಆರ್.ನಾಯ್ಕ್ ಸ್ವಾಗತಿಸಿ ಪ್ರಾಸ್ತಾವಿಸಿ. ಹಿರಿಯ ಶಿಕ್ಷಕ ಎಸ್.ರಾಜಗೋಪಾಲ ಜೋಶಿ ವಂದಿಸಿ, ಕನ್ನಡ ಅಧ್ಯಾಪಕ ಶಿವಕುಮಾರ್ ಸಾಯ ಕಾರ್ಯಕ್ರಮ ನಿರೂಪಿಸಿದರು.