ಅಫಜಲಪುರ ತಾಲೂಕಿನ ಗ್ರಾಮವೊಂದರ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ : ಮೊಬೈಲ್ ದಲ್ಲಿ ಚಿತ್ರೀಕರಿಸಿ ಹರಿಬಿಟ್ಟರು

Crime Logo
Published on


ಕಲಬುರಗಿ : ಅಪ್ರಾಪ್ತ ವಯಸ್ಕ ಬಾಲಕನ ಮೇಲೆ ಇಬ್ಬರು ಬಾಲಕರು ಹಾಗೂ ಇನ್ನೊಬ್ಬ ಸೇರಿಕೊಂಡು ಅಸಹಜ ಲೈಂಗಿಕ ದೌರ್ಜ್ಯನ ನಡೆಸಿದ ಘಟನೆ ಅಫಜಲಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ಎಲ್ಲಡೆ ಚರ್ಚೆಗೆ ಗ್ರಾಸವಾಗಿದೆ. ಮಾಹಿತಿ ಅರಿಯುತ್ತಲೇ ಎಸ್ಪಿ ಇಶಾ ಪಂತ್, ಸಿಪಿಐ ಪಂಡಿತ ಸಗರ ಮತ್ತು ಪೊಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾಹಿತಿ ಕಲೆ ಹಾಕಿದ್ದಾರೆ. ಕೃತ್ಯಕ್ಕೆ ಸಂಬAಧಿಸಿದAತೆ ಇಬ್ಬರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ. ಈ ಕುರಿತು  ಅಫಜಲಪುರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net