ಆಲೂರು ತಾಲೂಕು ಬರ ಪಟ್ಟಿಗೆ

Published on

ಆಲೂರು: ರಾಜ್ಯ ಸರ್ಕಾರ ಆಲೂರು ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಿರುವುದಕ್ಕೆ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದು ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ ತಿಳಿಸಿದರು.


ರಾಜ್ಯ ಸರ್ಕಾರ ಈ ಮೊದಲು ಆಲೂರು ತಾಲೂಕನ್ನು ಬರಪಟ್ಟಿಯಿಂದ ಕೈಬಿಟ್ಟಿತ್ತು. ಈ ಸಂಬಂಧ ತಾಲೂಕು ಬ್ಲಾಕ್ ಕಾಂಗ್ರೆಸ್, ಸಂಘ ಸಂಸ್ಥೆಗಳು ಮನವಿ ಮಾಡಿದ್ದರಿಂದ ಇದೀಗ ಆಲೂರು ತಾಲೂಕನ್ನು ಬರ ಪಟ್ಟಿಗೆ ಸೇರಿಸಿದೆ. ಇದರಿಂದ ರೈತರಿಗೆ ಅನುಕೂಲವಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಶಾಂತಕೃಷ್ಣ ಮಾತನಾಡಿ, ತಾಲೂಕನ್ನು ಬರ ಪಟ್ಟಿಗೆ ಸೇರಿಸುವಲ್ಲಿ ಮುಖಂಡ ಮುರಳಿಮೋಹನ ಅವರ ಪಾತ್ರ ಪ್ರಮುಖವಾಗಿದೆ ಎಂದು ಹೇಳಿದರು.


ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎಸ್.ಶಿವಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತಕೃಷ್ಣ, ಜಿಲ್ಲಾ ಉಪಾಧ್ಯಕ್ಷ ಅಜ್ಜೆನಹಳ್ಳಿ ರಂಗಯ್ಯ, ಜಿಲ್ಲಾ ಕಾರ್ಯದರ್ಶಿ ಬಿ.ಎಚ್.ಧರ್ಮಪ್ಪ, ಜಿಲ್ಲಾ ಕಾಂಗ್ರೆಸ್ ಸೇವಾದಳ ಅಧ್ಯಕ್ಷ ಎಂ.ಎಚ್.ರಂಗೇಗೌಡ, ಬಿ.ವೈ. ಶಿವೇಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net