

ತೊಗರಿ ಬೆಳೆ ವದರಿ ಆಧರಿಸಿ ಹೆಜ್ಜೆ / ಸಚಿವಾಲಯ ಸ್ಥಾಪನೆ
ಕಲಬುರಗಿ : ಜಿಲ್ಲೆ ಸೇರಿದಂತೆ ವಿವಿಧ ಕಡೆಗಳಲ್ಲಿ ನೆಟೆ ರೋಗ ಮತ್ತು ತೇವಾಂಶದ ಕೊರತೆಯಿಂದ ತೊಗರಿ ಹಾನಿಯಾಗಿರುವ ಕುರಿತು ವರದಿ ನಂತರ ರೈತರಿಗೆ ಪರಿಹಾರ ನೀಡಲು ವಿಶೇಷ ಪ್ಯಾಕೇಜ್ ನೀಡಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕೆಕೆಆರ್ ಡಿಬಿ ಅನುದಾನದಲ್ಲಿ ನಿರ್ಮಾಣಗೊಂಡಿರುವ ಜಯದೇವ ಹೃದ್ರೋಗ ಸಂಸ್ಥೆ ನೂತನ ಕಟ್ಟಡ ಉದ್ಘಾಟನೆಗೂ ಮುನ್ನ ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಜತೆಗೆ ಮಾತನಾಡಿ, ತೊಗರಿ ಹಾನಿ ಕುರಿತು ಚರ್ಚಿಸಲಾಗಿದೆ, ರೈತರ ಪರ ಶಾಸಕರು ಗಮನ ಸೆಳೆದಿದ್ದಾರೆ ಎಂದರು.
ಕಲ್ಯಾಣ ಕರ್ನಾಟಕಕ್ಕಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಕೆಲಸ ಪ್ರಗತಿಯಲ್ಲಿದೆ, ಶೀಘ್ರದಲ್ಲೇ ಆರಂಭಿಸಲಾಗುವುದು ಎಂದರು.