ಫಲಿತಾಂಶದ ಬಳಿಕ ಕಾಂಗ್ರೆಸ್ ದಿಕ್ಕಾಪಾಲು

BJP State President B Y Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Published on

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಇನ್ನೂ ನಾಲ್ಕೈದು ಬಾರಿ ರಾಜ್ಯಕ್ಕೆ ಪ್ರಚಾರಕ್ಕೆ ಬರುವವರಿದ್ದಾರೆ. ಈ ಬಾರಿ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಬಿಜೆಪಿ ಪರ ಒಲವು ಕಾಣುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಕೂಡ ರಾಜ್ಯಕ್ಕೆ ಆಗಮಿಸಿ ಕೆಲ ಅಭ್ಯರ್ಥಿಗಳ ಪರ ಪ್ರಚಾರ ಮಾಡಿ ರಾಜ್ಯದಲ್ಲಿ ಬಿಜೆಪಿಗೆ ಶಕ್ತಿ ತುಂಬುವರು ಎಂದರು.
ಮೋದಿ ಅವರ ಜನಪ್ರಿಯತೆ ದಿನೇದಿನೆ ಹೆಚ್ಚಾಗುತ್ತಿದೆ. ಪ್ರತಿ ಮನೆಯಲ್ಲೂ ಮೋದಿ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ನಿದ್ದೆಗೆಡಿಸಿದೆ. ಕೇಂದ್ರ ಸರ್ಕಾರ ಐದು ಕೆಜಿ ಅಕ್ಕಿ ಕೊಡುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ತನ್ಮೂಲಕ ರಾಜ್ಯದಲ್ಲಿ ಗ್ಯಾರಂಟಿ ಈಡೇರಿಸುವ ಭ್ರಮೆಯಲ್ಲಿತ್ತು. ಆದರೆ ಕೇಂದ್ರದಿಂದ ಯಾವಾಗ ಸಿಗುವುದಿಲ್ಲ ಎಂಬುದು ಗೊತ್ತಾಯಿತೋ ಚಿಂತೆಗೀಡಾಯಿತು. ಅದಕ್ಕಾಗಿ ಈಗ ಅಕ್ಕಿ ಬದಲು ಹಣ ಕೊಡುತ್ತಿದೆ ಎಂದು ಹೇಳಿದರು.
ದೇಶದ ಜನರು ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಅಪೇಕ್ಷಿಸುತ್ತಿದ್ದಾರೆ. ರಾಜ್ಯದಲ್ಲೂ ಬಿಜೆಪಿ ಎಲ್ಲ 28 ಸ್ಥಾನ ಗೆಲ್ಲುವುದರಲ್ಲಿ ಅನುಮಾನವಿಲ್ಲ. ಫಲಿತಾಂಶದ ಬಳಿಕ ಕಾಂಗ್ರೆಸ್ ದಿಕ್ಕಾಪಾಲಾಗುತ್ತದೆ. ಜನರು ಮೋದಿ ಗ್ಯಾರಂಟಿ ನೋಡುತ್ತಿದ್ದಾರೆಯೇ ಹೊರತು ರಾಜ್ಯ ಸರ್ಕಾರದ ಗ್ಯಾರಂಟಿ ನೋಡುತ್ತಿಲ್ಲ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net