ಚಾರ್ಮಾಡಿ ಮತ್ತೆ ನಿರ್ಬಂಧ ಹೇರಿಕೆ

charmadi new 1
Published on

ಮಂಗಳೂರು: ಅಪೂರ್ಣ ಕಾಮಗಾರಿ ಕಾರಣದಿಂದ ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಕೋರಿಕೆ ಮೇರೆಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ. ಚಿಕ್ಕಮಗಳೂರು ಭಾಗದ ಕಾಂಕ್ರಿಟ್ ಕಾಮಗಾರಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಾ.16ರಿಂದ ಲಘು ಹಾಗೂ ಕೆಲವು ಘನ ವಾಹನಗಳ ಸಂಚಾರಕ್ಕೆ ಅಲ್ಲಿನ ಜಿಲ್ಲಾಡಳಿತ ಅನುಮತಿ ನೀಡಿತ್ತು. ಆದರೆ ಘಾಟ್ ಪ್ರದೇಶದ ದ.ಕ. ಭಾಗದಲ್ಲಿ ಕಾಂಕ್ರಿಟ್ ಕಾಮಗಾರಿ ಇನ್ನೂ ನಡೆಯುತ್ತಲೇ ಇದೆ. ವಾಹನ ಸಂಚಾರಕ್ಕೆ ರಸ್ತೆ ಮುಕ್ತಗೊಳಿಸಿದ ಕಾರಣ ಕಾಮಗಾರಿಗೆ ತೊಡಕಾಗಿತ್ತು. ಇನ್ನು ಕನಿಷ್ಠ 15 ದಿನಗಳ ಕಾಲ ವಾಹನ ಸಂಚಾರ ನಿರ್ಬಂಧಿಸುವಂತೆ ದ.ಕ. ಜಿಲ್ಲಾಡಳಿತ ಕೋರಿತ್ತು. ಬಾಕಿ ಕಾಮಗಾರಿ ಪೂರ್ತಿಗೊಳಿಸುವ ಸಲುವಾಗಿ ಮಾ.16ರ ನಿರ್ಬಂಧ ತೆರವು ಆದೇಶವನ್ನು ಚಿಕ್ಕಮಗಳೂರು ಜಿಲ್ಲಾಡಳಿತ ವಾಪಸ್ ಪಡೆದಿದೆ. ಅಲ್ಲದೆ ಗುರುವಾರದಿಂದಲೇ ತಕ್ಷಣದಿಂದ ಜಾರಿಗೆ ಬರುವಂತೆ ಅನಿರ್ದಿಷ್ಟ ಕಾಲ ಚಾರ್ಮಾಡಿ ಘಾಟ್‌ನಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net