ನೌಕರರ ಸಂಘದ ವಿರುದ್ಧ ಸುಳ್ಳು ದೂರು:ಸಹಾಯಕ ಆಯುಕ್ತ ಅವಿನಾಶ ಶಿಂಧೆಗೆ ಮನವಿ

manavi
ಲಿಂಗಸುಗೂರು ಸಹಾಯಕ ಆಯುಕ್ತ ಅವಿನಾಶ ಶಿಂಧೆಗೆ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾಧ್ಯಕ್ಷ ಭೀಮಪ್ಪ ನಾಯಕ, ಹಾಜಿಬಾಬು ಕಲ್ಯಾಣಿ, ಶರಣಪ್ಪ ಸಾಹುಕಾರ, ರಾಮಕೃಷ್ಣ ನಾಯಕ, ಅಮರೇಶ, ವಿನಯ, ಅಮರೇಶ ಇತರರಿದ್ದರು.
Published on

ಲಿಂಗಸುಗೂರು: ರಾಜ್ಯ ಸರ್ಕಾರಿ ನೌಕರರ ಸಂಘವನ್ನು ತೇಜೋವಧೆ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿ ಸಹಾಯಕ ಆಯುಕ್ತ ಅವಿನಾಶ ಶಿಂಧೆಗೆ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಮಂಗಳವಾರ ಮನವಿ ಸಲ್ಲಿಸಿದರು.


ಶಾಂತಾರಾಮ, ಗುರುಸ್ವಾಮಿ, ಮಹಿಬೂಬ್ ಪಾಷಾ, ಶಿವರುದ್ರಯ್ಯ, ನಿಂಗೇಗೌಡ ಎಂಬುವವರು ಸಂಘದ ಅಧ್ಯಕ್ಷ, ಜಿಲ್ಲೆ ಹಾಗೂ ತಾಲೂಕು ಘಟಕದ ಪದಾಧಿಕಾರಿಗಳ ವಿರುದ್ಧ ನಕಲಿ ದಾಖಲೆ ಸೃಷ್ಟಿಸುವ ಮೂಲಕ ಆರೋಪಗಳನ್ನು ಮಾಡುತ್ತಿದ್ದಾರೆ. ಈ ಮೂಲಕ ಆಡಳಿತಾಧಿಕಾರಿ ನೇಮಕ ಮಾಡುವಂತೆ ಒತ್ತಾಯಿಸುತ್ತಿದ್ದಾರೆ. ಈ ಕುರಿತ ದೂರಿಗೆ ಮಹತ್ವ ನೀಡದೆ ಸಂಬಂಧಿಸಿದವರ ವಿರುದ್ಧ ಕಾನೂನು ಕ್ರಮ ವಹಿಸುವಂತೆ ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net