ಬದಲಾದ ಜೀವನ ಶೈಲಿಯಿಂದ ಕಾಯಿಲೆ ಉಲ್ಬಣ

health
ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಪ್ರಯುಕ್ತ ಆರೋಗ್ಯ ತಪಾಸಣೆ ಶಿಬಿರವನ್ನು ಡಾ.ವೀಣಾ ಕಾರಂತ್ ಉದ್ಘಾಟಿಸಿದರು.
Published on

ಗಂಗೊಳ್ಳಿ: ಬದಲಾದ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಬಹಳಷ್ಟು ಕಾಯಿಲೆ ಮನುಷ್ಯನನ್ನು ಕಾಡುತ್ತಿದೆ ಎಂದು ಶ್ರೀ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಕುತ್ಪಾಡಿ ಉದ್ಯಾವರ ವೈದ್ಯಕೀಯ ಅಧೀಕ್ಷಕ ಡಾ.ನಾಗರಾಜ್ ಹೇಳಿದರು.

ನಾಯಕವಾಡಿ-ಗುಜ್ಜಾಡಿ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಪ್ರಯುಕ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಉಡುಪಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯ ಬೈಂದೂರು ತಾಲೂಕು ಮತ್ತು ಶ್ರೀ ರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರ ನಾಯಕವಾಡಿ ಸಹಯೋಗದೊಂದಿಗೆ ನಡೆದ ಆರೋಗ್ಯ ತಪಾಸಣಾ ಉಚಿತ ಶಿಬಿರದಲ್ಲಿ ಮಾತನಾಡಿದರು.

ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ ಅಧ್ಯಕ್ಷ ಶ್ರೀಧರ ಎನ್. ಅಧ್ಯಕ್ಷತೆ ವಹಿಸಿದ್ದರು. ಕಾಲ್ತೋಡು ಸರ್ಕಾರಿ ಆಯುರ್ವೇದ ಚಿಕಿತ್ಸಾಲಯ ವೈದ್ಯಾಧಿಕಾರಿ ಡಾ.ವೀಣಾ ಕಾರಂತ್ ಶಿಬಿರ ಉದ್ಘಾಟಿಸಿದರು. ಶ್ರೀರಾಮ ಭಗವಾನ್ ಬ್ರಹ್ಮಶ್ರೀ ನಾರಾಯಣಗುರು ಮಂದಿರದ ಪ್ರದೀಪ ಪೂಜಾರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತ್ರಾಸಿ ವಲಯ ಬೈಂದೂರು ತಾಲೂಕು ಯೋಜನಾಧಿಕಾರಿ ವಿನಾಯಕ ಪೈ, ಬೆಣ್ಗೆರೆ ಶ್ರೀ ಸುಬ್ರಹ್ಮಣ್ಯೇಶ್ವರ ಯೂತ್ ಕ್ಲಬ್ ಅಧ್ಯಕ್ಷ ವಿಶ್ವನಾಥ ಮೇಸ್ತ, ನಾಯಕವಾಡಿ ಶ್ರೀ ಸಂಗಮೇಶ್ವರ ದೇವಸ್ಥಾನ ಅಧ್ಯಕ್ಷ ರಘುರಾಮ ಟಿ., ಆಸ್ಪತ್ರೆ ಹಿರಿಯ ಶಸ್ತ್ರಚಿಕಿತ್ಸಾ ತಜ್ಞ ಡಾ.ರಜನೀಶ್ ವಿ.ಗಿರಿ ಉಪಸ್ಥಿತರಿದ್ದರು. ಯುವಕ ಮಂಡಲ ಜತೆ ಕಾರ್ಯದರ್ಶಿ ಗಣೇಶ ಕುಮಾರ್ ಸ್ವಾಗತಿಸಿದರು. ಕಾರ್ಯದರ್ಶಿ ನಿತೇಶ್ ಕುಮಾರ್ ವಂದಿಸಿದರು. ರಾಜು ಮಾಸ್ಟರ್ ಕಾರ್ಯಕ್ರಮ ನಿರ್ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net