

ವಿಜಯವಾಣಿ ಸುದ್ದಿಜಾಲ ಧಾರವಾಡ
ಅಗ್ನಿಪಥ್ ಯೋಜನೆಯಡಿ 2024ನೇ ಸಾಲಿನಲ್ಲಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ. 22ರಿಂದ 31ರವರೆಗೆ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ರ‍್ಯಾಲಿಗೆ ಆಯ್ಕೆಯಾದ ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶ ಪತ್ರವನ್ನು ಅಭ್ಯರ್ಥಿಗಳ ಇ- ಮೇಲ್‌ಗೆ ರವಾನಿಸಲಾಗಿದೆ ಎಂದು ಮಂಗಳೂರಿನ ಸೇನಾ ನೇಮಕಾತಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.