

ಮಡಿಕೇರಿ: ಅಗ್ನಿಪಥ್ ಯೋಜನೆಯಡಿ ಸೇನೆಗೆ ಸೇರಲು ಅರ್ಜಿಹಾಕಿರುವ ಅಭ್ಯರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿಯುವ ಬಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ’ಅಗ್ನಿವೀರ್ ೨೦೨೨’ ರಸ್ತೆಓಟ ಸ್ಪರ್ಧೆ ಆ೭ರಂದು ನಡೆಯಲಿದೆ ಎಂದು ಅಸೋಸಿಯೇಷನ್ ಕಾರ್ಯದರ್ಶಿ ಚಂದ್ರಶೇಖರ್‌ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಡಿಕೇರಿ ಹೊರವಲಯದ ಕ್ಲಬ್ ಮಹೀಂದ್ರ ಬಳಿಯಿಂದ ಆರಂಭವಾಗಿ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜು ಗೇಟ್ ಬಳಿ ಕೊನೆಗೊಳ್ಳಲಿದೆ. ಬೆಳಗ್ಗೆ ೯.೩೦ಕ್ಕೆ ಸ್ಪರ್ಧೆ ಆರಂಭವಾಗಲಿದ್ದು, ಮಡಿಕೇರಿ ಉಪವಿಭಾಗದ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಚಾಲನೆ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಗದೀಶ್‌ರೈ, ಐತಪ್ಪರೈ, ಬಿ.ಕೆ. ರವೀಂದ್ರರೈ, ಜಯಪ್ರಕಾಶ್‌ರೈ, ಮಡಿಕೇರಿ ನಗರಸಭೆ ಸದಸ್ಯಅರುಣ್ ಶೆಟ್ಟಿ ಪಾಲ್ಗೊಳ್ಳಲಿದ್ದಾರೆ.
ನಂತರ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪಕಾಲೇಜು ಆವರಣದಲ್ಲಿ ಪುಲ್‌ಅಪ್ಸ್ ಸ್ಪರ್ಧೆ ಇರಲಿದೆ. ಬಳಿಕ ಬಾಲಭವನ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಾಗೂ ಪ್ರಶಸ್ತಿ ವಿತರಣೆ ನೆರವೇರಲಿದೆ. ಸಂಘದ ಅಧ್ಯಕ್ಷ ವಸಂತರೈ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಜಯಪ್ರಕಾಶ್‌ರೈ, ಐತಪ್ಪರೈ ಉಪಸ್ಥಿತರಿರಲಿದ್ದು, ಮಕ್ಕಳ ತಜ್ಞ ವೈದ್ಯ ಹಾಗೂ ನಿವೃತ್ತ ಸೇನಾಧಿಕಾರಿ ಮೇಜರ್‌ಡಾ. ಕುಶ್ವಂತ್ ಕೋಳಿಬೈಲು ಮುಖ್ಯ ಭಾಷಣ ಮಾಡಲಿದ್ದಾರೆ.
ಜಿಲ್ಲೆಯ ವಿವಿಧೆಡೆಯ ನೂರಕ್ಕೂ ಅಧಿಕ ಅಭ್ಯರ್ಥಿಗಳು ಸ್ಪರ್ಧೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಓಟ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದತಲಾ ನಾಲ್ಕು ಸ್ಪರ್ಧಿಗಳಿಗೆ ಹಾಗೂ ಪುಲ್‌ಅಪ್ಸ್‌ನಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದವರಿಗೆ ವಿಶೇಷ ಬಹುಮಾನ ನೀಡಲಾಗುವುದು. ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಂಡ ಪ್ರತಿಯೊಬ್ಬ ಸ್ಪರ್ಧಿಗೆ ವಿಶೇಷ ಉಡುಗೊರೆ ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.