

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಂಡ್ಯದವರು ಛತ್ರಿಗಳು ಎಂಬ ಶಬ್ದ ಬಳಸಿ ಅವಮಾನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಮಂಡ್ಯಕ್ಕೆ ಬಂದು ಕ್ಷಮೆಯಾಚನೆ ಮಾಡಬೇಕು ಎಂದು ರೈತಪರ ಹೋರಾಟಗಾರರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಎಚ್.ಎಸ್.ಚಂದ್ರಶೇಖರ್ ಆಗ್ರಹಿಸಿದರು.
ಉನ್ನತ ಸ್ಥಾನ ಅಲಂಕರಿಸಿರುವ ಡಿ.ಕೆ.ಶಿವಕುಮಾರ್ ಆ ಮಾತನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ಹೇಳಿರುವುದೋ ಅಥವಾ ಮಂಡ್ಯ ಜನತೆಗೆ ಹೇಳಿರುವುದೋ ಸ್ಪಷ್ಟಪಡಿಸಬೇಕು. ಉಪಮುಖ್ಯಮಂತ್ರಿ ಸ್ಥಾನದಲ್ಲಿದ್ದು, ಇಂತಹ ಹೇಯಕರ ಪದ ಬಳಸಿ ಮಾತನಾಡಿರುವುದು ಅವರ ಯೋಗ್ಯತೆಯನ್ನು ತೋರುತ್ತದೆ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ಹೊರಹಾಕಿದರು.
ಡಿಕೆಶಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇದಲ್ಲದೆ ಮಂಡ್ಯಕ್ಕೆ ಬಂದು ಕ್ಷಮೆಯಾಚನೆ ಮಾಡದಿದ್ದರೆ, ಅವರ ಮುಖಕ್ಕೆ ಮಸಿ ಬಳೆದು ಕಪ್ಪು ಬಟ್ಟೆ ಪ್ರದರ್ಶನ ಮಾಡಲಾಗುವುದು ಎಂದು ಎಚ್ಚರಿಸಿದರು.
ಉಪಾಧ್ಯಕ್ಷ ಎಂ.ಕೆ.ಸಂಜಯ್‌ಕುಮಾರ್, ಪ್ರಧಾನ ಕಾರ್ಯದರ್ಶಿ ಬಿ.ರಮೇಶ್ ಇದ್ದರು.