

ಗದಗ: ಮುಂಗಾರು ಹಂಗಾಮು ಅವಧಿಗೆ ಗದಗ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ನೀರಾವರಿ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆ ವಿಮೆ ಕಂತು ಪಾವತಿಗೆ ಜುಲೈ 31 ರಂದು ಕೊನೆಯ ದಿನವಾಗಿರುತ್ತದೆ. ಮಳೆಯಾಶ್ರಿತ ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗೆ ವಿಮೆ ಕಂತು ಪಾವತಿಗೆ ಜುಲೈ 16 ರಂದು ಕೊನೆಯ ದಿನವಾಗಿದೆ. ರೈತರು ವಿಮೆಗೆ ನೋಂದಾಯಿಸಿಕೊಳ್ಳಲು ಅರ್ಜಿ ಪತ್ರ, ಪಹಣಿ, ಆಧಾರ ಸಂಖ್ಯೆ ಜೋಡಿಸಿದ ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ ಹಾಗೂ ಸ್ವಯಂ ಘೋಷಿತ ಬೆಳೆ ದೃಢೀಕರಣ ಪತ್ರದೊಂದಿಗೆ ರಾಷ್ಟೀಕೃತ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ, ಗ್ರಾಮ ಒನ್ ಕೇಂದ್ರಗಳಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆ , ಕೃಷಿ ಇಲಾಖೆ ಕಛೇರಿಗಳಿಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದೆಂದು ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.