ಸಿಎಂ ಸ್ಥಾನಕ್ಕೆ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಗ್ರಿಮೆಂಟ್ : ಆರ್. ಅಶೋಕ್ ವ್ಯಂಗ್ಯ

R Ashoka
Published on

ಮೈಸೂರು: ಸಿದ್ದರಾಮಯ್ಯ ಆರು ತಿಂಗಳಲ್ಲಿ ಅಧಿಕಾರ ತೊರೆಯುವ ಬಗ್ಗೆ ಕೇವಲ ನೋಟರಿ ಆಫೀಸ್‌ನಲ್ಲಿ ಅಗ್ರಿಮೆಂಟ್ ಆಗಿದ್ದಲ್ಲ, ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಗ್ರಿಮೆಂಟ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯವಾಡಿದರು.

ಸದನದಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಬದಲಾವಣೆ ವಿಚಾರವಾಗಿ ಮಾತನಾಡಿ ‘ಒದ್ದು ಕೆಳಗಿಳಿಸಿ ಅಧಿಕಾರಕ್ಕೆ ಬರುತ್ತೇವೆ’ ಎಂದು ಹೇಳಿಕೆ ನೀಡಿದ್ದರು. ಆ ಸಂದರ್ಭ ನಾನು ಯಾವಾಗ ಎಂದು ಪ್ರಶ್ನಿಸಿದಾಗ ಡಿ.ಕೆ.ಶಿವಕುಮಾರ್ ನಕ್ಕು ಸುಮ್ಮನಾಗಿದ್ದರು. ಮುಂದಿನ ಬಜೆಟ್ ಯಾರು ಮಂಡಿಸುತ್ತಾರೆ ಎಂದು ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದಾಗ ‘ಕಾಂಗ್ರೆಸ್’ ಎಂಬ ಉತ್ತರವನ್ನು ನೀಡಿದ್ದಾರೆ. ಸಿಎಂ ಬದಲಾವಣೆ ಸುಳಿವಿಗೆ ಇಷ್ಟು ಸಾಕಲ್ಲವೇ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.

ಸಿಎಂ ಕುರ್ಚಿ ಗಟ್ಟಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಲು ಹೇಗೆ ಸಾಧ್ಯ? ನಾನು ಸಿಎಂ ಆಗುತ್ತೇನೆ ಎಂದು ಡಾ.ಜಿ. ಪರಮೇಶ್ವರ್ ಹೇಳುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಸಿಎಂ ಕುರ್ಚಿಗೆ ಟವಲ್ ಹಾಕಿದ್ದಾರೆ. ಜಾರಕಿಹೊಳಿ ನಾನೂ ಆಗಬಹುದು ಎನ್ನುತ್ತಿದ್ದಾರೆ. ಮತ್ತೊಂದು ಕಡೆ ಎಂ.ಬಿ. ಪಾಟೀಲ್ ನಾನು ಒಂದು ಕೈ ನೋಡುತ್ತೆನೆ ಎನ್ನುತ್ತಿದ್ದಾರೆ. ಕಾಂಗ್ರೆಸ್‌ನಲ್ಲಿ ಸಿಎಂ ಆಗುವವರ ದೊಡ್ಡ ಪಟ್ಟಿಯೇ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net