ಕೊಡಗು ವಿವಿ- ಬ್ರಿಡ್ಜ್ವಾಟರ್ ಸ್ಟೇಟ್ ಯೂನಿವರ್ಸಿಟಿ ನಡುವೆ ಜಂಟಿ ಒಡಂಬಡಿಕೆ

agreement
Published on

ಕುಶಾಲನಗರ:

ದ್ವಿತೀಯ ವರ್ಷದ ಸಂಸ್ಥಾಪನಾ ದಿನಾಚರಣೆಯ ಹೊಸ್ತಿಲಿನಲ್ಲಿರುವ ಕೊಡಗು ವಿಶ್ವವಿದ್ಯಾಲಯ ಮತ್ತು ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಮ್ಯಾಸಚೂಸೆಟ್ಸ್ನಲ್ಲಿರುವ ಬ್ರಿಡ್ಜ್ವಾಟರ್ ಸ್ಟೇಟ್ ಯೂನಿವರ್ಸಿಟಿ ನಡುವೆ ಜಂಟಿ ಒಡಂಬಡಿಕೆ ಆಗಿದೆ. ಬೆಂಗಳೂರಿನಲ್ಲಿ ಈಚೆಗೆ ನಡೆದ ಅಕಾಡೆಮಿಕ್ ಅಲಯನ್ಸಸ್ ಕಾರ್ಯಕ್ರಮದಲ್ಲಿ ಬ್ರಿಡ್ಜ್ವಾಟರ್ ಸ್ಟೇಟ್ ಯೂನಿವರ್ಸಿಟಿ ಅಧ್ಯಕ್ಷ ಫ್ರೆಡ್ರಿಕ್ ಕ್ಲಾರ್ಕ್ ಮತ್ತು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ಈ ಜಂಟಿ ಒಡಂಬಡಿಕೆಗೆ ಸಹಿ ಹಾಕಿದರು.

ಕೊಡಗು ವಿಶ್ವವಿದ್ಯಾಲಯದ ಅಧ್ಯಾಪಕರುಗಳು ಮತ್ತು ವಿದ್ಯಾರ್ಥಿಗಳು ಅಮೇರಿಕಾದ ಮ್ಯಾಸಚೂಸೆಟ್ಸ್ನಲ್ಲಿರುವ ಬ್ರಿಡ್ಜ್ವಾಟರ್ ಸ್ಟೇಟ್ ಯೂನಿವರ್ಸಿಟಿಯಲ್ಲಿ ಉನ್ನತ ಅಧ್ಯಯನ ಮತ್ತು ತರಬೇತಿ ಪಡೆಯಲು ಈ ಒಡಂಬಡಿಕೆ ಸಹಕಾರಿಯಾಗಲಿದೆ. ಅದರ ಜತೆಗೆ ಕೊಡಗು ವಿಶ್ವವಿದ್ಯಾಲಯ ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ ಮ್ಯಾಸಚೂಸೆಟ್ಸ್ನಲ್ಲಿರುವ ಬ್ರಿಡ್ಜ್ವಾಟರ್ ಸ್ಟೇಟ್ ಯೂನಿವರ್ಸಿಟಿ ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಮತ್ತು ಸಮ್ಮೇಳನಗಳನ್ನು ಆಯೋಜಿಸಲು ಅನುವು ಮಾಡಿಕೊಡಲಿದೆ.

ವಿಶ್ವವಿದ್ಯಾಲಯಗಳ ನಡುವೆ ಜಂಟಿ ಪದವಿ ಕೋರ್ಸ್ಗಳನ್ನು ಆರಂಭಿಸಲು ಸಹಕಾರಿಯಾಗಲಿದೆ. ಈ ಜಂಟಿ ಒಡಂಬಡಿಕೆಯ ಸಂದರ್ಭದಲ್ಲಿ ಬ್ರಿಡ್ಜ್ವಾಟರ್ ಸ್ಟೇಟ್ ಯೂನಿವರ್ಸಿಟಿ ಅಧ್ಯಕ್ಷರು ಮತ್ತು ಅವರ ನಿಯೋಗ ಹಾಜರಿತ್ತು ಉಪಸ್ಥಿತರಿದ್ದರು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಶೋಕ ಸಂಗಪ್ಪ ಆಲೂರ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net