

ಕಲಬುರಗಿ : ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ನಗದ ವಿಕಾಸ ಸೌಧದಲ್ಲಿ ಇಂದು ಕಲಬುರಗಿ ವಿಭಾಗ ಮಟ್ಟದ ಕೃಷಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.
ಬರದ ಸ್ಥಿತಿ ಮತ್ತು ಬೆಳಗಳ ಕುರಿತು ಏಳು ಜಿಲ್ಲೆಗಳ ಜಂಟಿ ಕೃಷಿ ನಿರ್ದೇಶಕರಿಂದ ಮಾಹಿತಿ ಪಡೆದುಕೊಂಡರು. ಅಧಿಕಾರಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಸೂಚಿಸಿದರು.
ಶಾಸಕರಾದ ಬಿ.ಆರ್.ಪಾಟೀಲ, ಎಂ.ವೈ.ಪಾಟೀಲ, ಅಲ್ಲಮಪ್ರಭು ಪಾಟೀಲ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಕೃಷಿ ಆಯುಕ್ತರು, ಕೃಷಿ ನಿರ್ದೇಶಕರು, ಹಿರಿಯ ಅಧಿಕಾರಿಗಳು ಇದ್ದರು