

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಕೃಷಿ ವಿಶ್ವ ವಿದ್ಯಾಲಯದ 38ನೇ ಘಟಿಕೋತ್ಸವವನ್ನು ಮೇ 14ರಂದು ಬೆಳಗ್ಗೆ 10 ಗಂಟೆಗೆ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಿ ಪದವಿ ಹಾಗೂ ಪ್ರಶಸ್ತಿಗಳನ್ನು ಪ್ರದಾನ ಮಾಡುವರು. ಐಸಿಎಆರ್-ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಚಿ. ಶ್ರೀನಿವಾಸ ರಾವ್ ಅತಿಥಿಯಾಗಿ ಆಗಮಿಸುವರು. ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಉಪಸ್ಥಿತರಿರುವರು. ಕೃವಿವಿ ಕುಲಪತಿ ಡಾ. ಪಿ.ಎಲ್. ಪಾಟೀಲ ವರದಿ ಮಂಡಿಸುವರು. ವಿಶ್ವ ವಿದ್ಯಾಲಯದ ವ್ಯವಸ್ಥಾಪನಾ ಮಂಡಳಿ ಹಾಗೂ ವಿದ್ಯಾವಿಷಯಕ ಪರಿಷತ್ ಸದಸ್ಯರು ಉಪಸ್ಥಿತರಿರುವರು.
ಘಟಿಕೋತ್ಸವದಲ್ಲಿ 41 ಪಿಎಚ್.ಡಿ, 197 ಸ್ನಾತಕೋತ್ತರ ಹಾಗೂ 625 ಸ್ನಾತಕ ಪದವಿಗಳನ್ನೊಳಗೊಂಡಂತೆ ಒಟ್ಟು 863 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 64 ಚಿನ್ನದ ಪದಕ ಹಾಗೂ 9 ನಗದು ಬಹುಮಾನಗಳನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.