ಕೃಷಿ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ

896e68dc-18db-49d4-ba09-d91f6e364c3c
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ನಗರದ ಕೃಷಿ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಜ. 17ರಂದು ಬೆಳಗ್ಗೆ 10 ಗಂಟೆಗೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಜರುಗಲಿದೆ. ಬೈಲೂರು ನಿಷ್ಕಲ ಮಂಟಪದ ಶ್ರೀ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮೀಜಿ, ಪಶ್ಚಿಮ ಬಂಗಾಳದ ರಾಮಕೃಷ್ಣ ಅಭಿಯಾನ ವಿವೇಕಾನಂದ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮುಖ್ಯಸ್ಥ ಶ್ರೀ ಶಿವಪೂರ್ಣಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಕೃಷಿ ವಿವಿ ಕುಲಪತಿ ಹಾಗೂ ಕೃಷಿ ಮಹಾವಿದ್ಯಾಲಯದ ಪದವೀಧರರ ಸಂಘದ ಅಧ್ಯಕ್ಷ ಡಾ. ಪಿ.ಎಲ್. ಪಾಟೀಲ ಅಧ್ಯಕ್ಷತೆ ವಹಿಸುವರು. ಸಂಘದ ಉಪಾಧ್ಯಕ್ಷ ಹಾಗೂ ವಿದ್ಯಾಽಕಾರಿ ಡಾ. ಐ.ಕೆ. ಕಾಳಪ್ಪನವರ ಹಳೆಯ ವಿದ್ಯಾರ್ಥಿಗಳ ಸಮ್ಮಿಲನದ ಸಮಿತಿಯ ಅಧ್ಯಕ್ಷ ಡಾ. ವೈ.ಬಿ. ಪಾಟೀಲ ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘದ ಪದಾಽಕಾರಿಗಳು ಹಾಗೂ ಸದಸ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net