

ಮೈಸೂರು: ವಿಶ್ವೇಶ್ವರಯ್ಯ ಡೆವಲಪ್‌ಮೆಂಟ್ ಆರ್ಗನೈಜೇಷನ್, ಮೈಕ್ರೋಬಿ ಫೌಂಡೇಷನ್‌ಗಳ ಸಂಯುಕ್ತಾಶ್ರಯದಲ್ಲಿ ಜ.7ರಂದು ಬೆಳಗ್ಗೆ 10 ಗಂಟೆಗೆ ನಗರದ ಕಲಾಮಂದಿರದಲ್ಲಿ ‘ಕೃಷಿ ಸುಗ್ಗಿ ಸಂಭ್ರಮ’ ಹಾಗೂ ‘ಪುಸ್ತಕಗಳ ಲೋಕಾರ್ಪಣೆ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಕೆ.ಗಣೇಶ್ ತಿಳಿಸಿದರು.
ಶಾಸಕ ಪಿ.ಎಂ.ನರೇಂದ್ರಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಡಾ.ಕೆ.ಆರ್.ಹುಲ್ಲುನಾಚೇಗೌಡ ಅಧ್ಯಕ್ಷತೆ ವಹಿಸುವರು. ಶಾಸಕರಾದ ಟಿ.ಎಸ್.ಶ್ರೀವತ್ಸ, ದರ್ಶನ್ ಪುಟ್ಟಣ್ಣಯ್ಯ ಇತರರು ಭಾಗವಹಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಯುವ ರೈತರಿಗೆ ಮಾದರಿ ಆಗುವ ನಿಟ್ಟಿನಲ್ಲಿ ನಡೆಸಿದ ಸಮೀಕ್ಷೆ ವೇಳೆ ಸಾಧನೆ ಮಾಡಿರುವ ರೈತರನ್ನು ಗುರುತಿಸಲಾಗಿದ್ದು, ಅವರಿಗೆ ನಾನಾ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಕುಮಾರ್, ಮಂಜುನಾಥ ಡಿಂಕ, ಸತ್ಯಶ್ರೀ ಬಿ. ಶ್ಯಾಮ್ ಇದ್ದರು.