ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯ

Published on

ಸೋಮವಾರಪೇಟೆ: 2024-25ನೇ ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50 ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಕೆ.ಪಿ.ವೀರಣ್ಣ ತಿಳಿಸಿದ್ದಾರೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಆರ್‌ಟಿಸಿ, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಒಂದು ಭಾವಚಿತ್ರ ಹಾಗೂ 100 ರೂ.ಗಳ ಛಾಪಾ ಕಾಗದದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಕೃಷಿ ಉಪಕರಣಗಳಾದ ರಾಗಿ ಕ್ಲೀನಿಂಗ್ ಯಂತ್ರ , ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ರೋಟವೇಟರ್, ಕಲ್ಟಿವೇಟರ್, ಕಳೆ ಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡೀಸೆಲ್ ಪಂಪ್‌ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಹಿಟ್ಟು ಮಾಡುವ ಯಂತ್ರಗಳು, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ. 50 ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ರೈತರು ಪಡೆದುಕೊಳ್ಳಲು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net