ಕೊಲಂಬೊದಲ್ಲಿ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ಎಕ್ಸ್‌ಪೋ; ಭಾರತ್ ಸೂಪರ್ ಮಾರ್ಟ್ ಆಯೋಜನೆ

BSM
Published on

ಬೆಂಗಳೂರು: ಕರ್ನಾಟಕದ ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದಲ್ಲಿ ಆಗಿರುವ ಅನ್ವೇಷಣೆಗಳು ಮತ್ತು ಉತ್ಪಾದನಾ ಕ್ಷೇತ್ರದಲ್ಲಿನ ಪ್ರಗತಿಯನ್ನು ನೆರೆಯ ರಾಷ್ಟ್ರದಲ್ಲಿ ವಿಸ್ತರಿಸುವ ಉದ್ದೇಶದಿಂದ ಭಾರತ್ ಸೂಪರ್ ಮಾರ್ಟ್ ಶ್ರೀಲಂಕಾ ರಾಜಧಾನಿ ಕೊಲಂಬೊದಲ್ಲಿ ಡಿ.20 ರಿಂದ 22ರವರೆಗೆ ಮೂರು ದಿನಗಳ ವಿಜ್ಞಾನ ಮತ್ತು ತಂತ್ರಜ್ಞಾನ ಎಕ್ಸ್‌ಪೋ ಹಮ್ಮಿಕೊಂಡಿದೆ. ಭಾರತದಲ್ಲಿ ಕೃಷಿ ಉತ್ಪಾದನೆ ಮತ್ತು ಪ್ರಗತಿ ಉನ್ನತ ಸ್ಥಾನದಲ್ಲಿದೆ. ವಿಶೇಷವಾಗಿ ಕರ್ನಾಟಕದಲ್ಲಿ ನಾಲ್ಕು ಕೃಷಿ ವಿಶ್ವ ವಿದ್ಯಾಲಯ, ಒಂದು ತೋಟಗಾರಿಕಾ ವಿಶ್ವವಿದ್ಯಾಲಯ, ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆ ಹೀಗೆ ಹಲವು ಸಂಸ್ಥೆಗಳು ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತಿವೆ. ಇದರ ಲವಾಗಿ ರಾಜ್ಯದ ಕೃಷಿಕ್ಷೇತ್ರಕ್ಕೆ ಸಂಬಂಧ ಪಟ್ಟಂತೆ ಹಲವು ಅನ್ವೇಷಣೆ, ವಿಜ್ಞಾನ-ತಂತ್ರಜ್ಞಾನದ ಆವಿಷ್ಕಾರ ಮತ್ತು ಉತ್ಪಾದನಾ ಕ್ಷೇತ್ರದಲ್ಲಿ ಗಮನಾರ್ಹ ಪ್ರಗತಿಯಾಗಿದೆ. ಈ ಸಾಧನೆಯನ್ನು ಜಾಗತಿಕ ಮಟ್ಟದಲ್ಲಿ ವಿನಿಮಯ ಮಾಡಿಕೊಳ್ಳುವುದರ ಮೂಲಕ ಸ್ಥಳೀಯ ರೈತರನ್ನು ವಿಶ್ವದ ಇತರೆ ರಾಷ್ಟ್ರಗಳೊಂದಿಗೆ ಸಂಪರ್ಕ ಸಾಧಿಸುವ ಮತ್ತು ರ್ತು ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಭಾರತ್ ಸೂಪರ್ ಮಾರ್ಟ್ ಸಂಸ್ಥೆಯು ಡಿ.20 ರಿಂದ ಮೂರು ದಿನಗಳ ಮೇಳವನ್ನು ಆಯೋಜಿಸಿದೆ ಎಂದು  ಸುದ್ದಿಗೋಷ್ಠಿಯಲ್ಲಿ ಕೊಡಗು ವಿಶ್ವವಿದ್ಯಾಲಯದ ಕುಲಪತಿ ಅಶೋಕ್ ಆಲೂರು ತಿಳಿಸಿದರು.  ಸುದ್ದಿಗೋಷ್ಠಿಯಲ್ಲಿ ಕೃಷಿತಜ್ಞರಾದ ಪ್ರಕಾಶ ಪಾಟೀಲ್, ಡಾ.ಎಂ.ವಿ.ಧನಂಜಯ, ಜೆ.ಕೆ.ದೇವೇಂದ್ರಪ್ಪ, ಡಾ.ಎಂ.ಎಸ್.ರಾವ್, ಡಾ.ಎಸ್.ತಿಪ್ಪೇಸ್ವಾಮಿ ಮತ್ತಿತರರಿದ್ದರು.

ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ

ಕೊಲಂಬೊದಲ್ಲಿ ನಡೆಯುವ ಮೇಳದಿಂದ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ, ಪಶುಸಂಗೋಪನೆ, ಆಹಾರ ಕ್ಷೇತ್ರಗಳ ಸಂಶೋಧನೆ, ಇ-ಕಾಮರ್ಸ್, ಮಾರುಕಟ್ಟೆ ಅವಕಾಶ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಉತ್ತಮ ಪರಿಣಾಮ ಬೀರಲಿದೆ ಎಂದು ಭಾರತ್ ಸೂಪರ್ ಮಾರ್ಟ್ ಸಂಸ್ಥೆಯ ಎಂ.ಡಿ. ರಮೇಶ್ ಕಂಚು ಕೋಮಲ್ ಅಭಿಪ್ರಾಯಿಸಿದ್ದಾರೆ. ಶ್ರೀಲಂಕಾದಿಂದ ಜಗತ್ತಿನ ಹಲವು ರಾಷ್ಟ್ರಗಳಿಗೆ ಹಣ್ಣು-ತರಕಾರಿ ಮತ್ತಿತರ ಆಹಾರ ಪದಾರ್ಥಗಳನ್ನು ರ್ತು ಮಾಡಲು ವಿಪುಲ ಅವಕಾಶಗಳಿದ್ದು, ಈ ಬಗ್ಗೆ ರೈತರಿಗೆ ಮಾಹಿತಿ ಮತ್ತು ತಿಳುವಳಿಕೆ ನೀಡಲಾಗುತ್ತಿದೆ. ಮೇಳದಲ್ಲಿ ಕೃಷಿಕ್ಷೇತ್ರಕ್ಕೆ ಸಂಬಂಧಪಟ್ಟ ವಿಜ್ಞಾನ-ತಂತ್ರಜ್ಞಾನ ಆವಿಷ್ಕಾರದಲ್ಲಿ ತೊಡಗಿರುವ ನೂರಕ್ಕೂ ಹೆಚ್ಚು ಸ್ಟಾರ್ಟಪ್‌ಗಳು ಪಾಲ್ಗೊಳ್ಳುತ್ತಿವೆ ಎಂದು ರಮೇಶ ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net