ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಟೇಕ್‌ಆ್

Kailancha-Ph-01-Ragi-Bittane-28-7-2021
agriculture
Published on

9632 ಟನ್ ರಸಗೊಬ್ಬರ ದಾಸ್ತಾನುವದಂತಿಗಳಿಗೆ ಕಿವಿಗೊಡದಂತೆ ಕೃಷಿ ಇಲಾಖೆ ಮನವಿ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಪ್ರಸಕ್ತ ಸಾಲಿನ ಕೃಷಿ ಚಟುವಟಿಕೆಗೆ ಪೂರಕವಾಗುವ ವಾತಾವರಣ ನಿರ್ಮಾಣವಾಗಿದ್ದು, ಜಿಲ್ಲೆಯಲ್ಲಿ ಕೃಷಿ ಚಟುವಟಿಕೆ ಟೇಕ್‌ಆ್ ಆಗಿದೆ. ಅಗತ್ಯ ರಸಗೊಬ್ಬರ ದಾಸ್ತಾನು, ಬಿತ್ತನೆ ಬೀಜ ಪೂರೈಕೆಗೆ ಕೃಷಿ ಇಲಾಖೆ ಸನ್ನದ್ಧವಾಗಿದ್ದು, 69960 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಸಾಮಾನ್ಯವಾಗಿ ಜಿಲ್ಲೆಯಲ್ಲಿ ಜುಲೈ ಮಧ್ಯಾಂತರದ ಬಳಿಕ ಬಿತ್ತನೆ ಕಾರ್ಯ ಆರಂಭವಾಗುತ್ತದೆ, ಕಳೆದೊಂದು ತಿಂಗಳಿಂದಲೇ ಬಿತ್ತನೆ ಕಾರ್ಯಕ್ಕೆ ಭೂಮಿ ಹದ ಮಾಡಿಕೊಳ್ಳುವ ಕಾರ್ಯ ಬಿರುಸಿನಿಂದ ಸಾಗಿದೆ. ಈ ಸಾಲಿನಲ್ಲಿ 69960 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ನಡೆಸುವ ನಿರೀಕ್ಷೆಯಿದ್ದು ಈಗಾಗಲೇ 6 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದೆ. ಆಗಸ್ಟ್ ಅಂತ್ಯದೊಳಗೆ ಬಿತ್ತನೆ ಕಾರ್ಯ ಪೂರ್ಣಗೊಳ್ಳಲಿದೆ.ಇದರಲ್ಲಿ ಜಿಲ್ಲೆಯ ಪ್ರಮುಖ ಬೆಳೆ ರಾಗಿಗೆ ಪ್ರಾಧಾನ್ಯತೆ ನೀಡಲಾಗಿದೆ. ನಂತರದಲ್ಲಿ ಮುಸುಕಿನ ಜೋಳ, ತೊಗರಿ ಹಾಗೂ ನೆಲಗಡಲೆ ಬಿತ್ತನೆಯ ಗುರಿ ಹೊಂದಲಾಗಿದೆ.
9632 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು: ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿ ಸೇರಿ ನಾಲ್ಕೂ ತಾಲೂಕುಗಳ ವ್ಯಾಪ್ತಿಯಲ್ಲಿ ಈ ಬಾರಿ 9 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ಅವಶ್ಯಕತೆ ಇದೆ ಎಂದು ಅಂದಾಜಿಸಿದ್ದು ಈಗಾಗಲೇ 9632 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. 700ಮೆಟ್ರಿಕ್ ಟನ್ ಡಿಎಪಿ, 5 ಸಾವಿರ ಟನ್ ಕಾಂಪ್ಯಾಕ್ಟ್ (ಸಂಯುಕ್ತ ರಸಗೊಬ್ಬರ) ಪೂರೈಕೆಯಾಗಿದೆ ಈ ಬಾರಿಯ ರಸಗೊಬ್ಬರ ದರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿಲ್ಲ ಎಂದು ಕೃಷಿ ಇಲಾಖೆ ತಿಳಿಸಿದೆ.
ಕಳೆದ ಸಾಲಿನ ಗುರಿ: ಕಳೆದ ಸಾಲಿನಲ್ಲಿ 15602 ಹೆಕ್ಟೇರ್ ಪ್ರದೇಶದಲ್ಲಿ ರಾಗಿ ಹಾಗೂ 2420 ಹೆಕ್ಟೇರ್ ಪ್ರದೇಶದಲ್ಲಿ ಜೋಳದ ಬಿತ್ತನೆ ಕಾರ್ಯ ನಡೆದಿತ್ತು. ಆದರೆ ಮಳೆ ಕೊರತೆಯಿಂದ ನಿರೀಕ್ಷೆಯಷ್ಟು ಬಿತ್ತನೆಯಾಗಲಿಲ್ಲ ಜತೆಗೆ ನಿರೀಕ್ಷಿತ ಬೆಳೆಗೂ ಕುತ್ತು ಬಂದಿತ್ತು. ಈ ಬಾರಿ ಶೇ.100 ಬಿತ್ತನೆಯಾಗುವ ನಿರೀಕ್ಷೆ ಇದೆ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ವರ್ಷದಿಂದ ವರ್ಷಕ್ಕೆ ಕೃಷಿ ಚಟುವಟಿಕೆಗಳಲ್ಲಿ ಚುರುಕು ಪಡೆಯುತ್ತಿರುವ ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ ಮತ್ತಷ್ಟು ಸಲು ಪಡೆಯುವ ನಿಟ್ಟಿನಲ್ಲಿ ಕೃಷಿ ಇಲಾಖೆ ರೈತರೊಂದಿಗೆ ನಿರಂತರ ಸಂಪರ್ಕ ಸಾಧಿಸುತ್ತಿದ್ದು, ಕೃಷಿ ಚಟುವಟಕೆಗೆ ಅಗತ್ಯವಿರುವ ನೆರವು ನೀಡಲು ಅಧಿಕಾರಿಗಳ ತಂಡ ಶ್ರಮಿಸುತ್ತಿದೆ.
ಸಂಯುಕ್ತ ರಸಗೊಬ್ಬರ ಬಳಸಿ: ಪೋಟಾಷಿಯಂ, ಸಾರಜನಕ ಹಾಗೂ ರಂಜಕ ಅಂಶಗಳಿರುವ ಕಾಂಪ್ಯಾಕ್ಟ್ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಬೆಳೆಗೆ ರೋಗ ಹರಡುವುದನ್ನು ತಪ್ಪಿಸುವಲ್ಲಿ ಈ ಗೊಬ್ಬರ ಸಹಕಾರಿಯಾಗಿರುತ್ತದೆ ಒಂದು ವೇಳೆ ಕಾಳುಕಟ್ಟುವ ಸಮಯದಲ್ಲಿ ಮಳೆ ಕೊರತೆಯಾದರೂ ಬೆಳೆ ಸಂರಕ್ಷಣೆಗೆ ಅನುಕೂಲವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಈ ಬಾರಿ 69960 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಚಟುವಟಿಕೆ ಗುರಿ ಹೊಂದಲಾಗಿದೆ. ಜು. ಅಂತ್ಯದ ವೇಳೆಗೆ ಬಿತ್ತನೆ ಕಾರ್ಯ ಚುರುಕುಗೊಳ್ಳಲಿದೆ, ಪ್ರಸ್ತುತ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತಿದೆ. ಜಿಲ್ಲೆಯಲ್ಲಿ ಬೇಡಿಕೆಗಿಂತ ಹೆಚ್ಚುವರಿಯಾಗಿ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ಕೃಷಿ ಚಟುವಟಿಕೆಗೆ ಬೇಕಾದ ಎಲ್ಲ ನೆರವು ನೀಡಲು ಇಲಾಖೆ ಸನ್ನದ್ಧವಾಗಿದೆ.

ಲಲಿತಾರೆಡ್ಡಿ, ಜಂಟಿ ನಿರ್ದೇಶಕಿ ಕೃಷಿ ಇಲಾಖೆ ಬೆಂ.ಗ್ರಾಮಾಂತರ

ರಸಗೊಬ್ಬರ, ಬಿತ್ತನೆ ಬೀಜ ಸೇರಿ ಕೃಷಿ ಚಟುವಟಿಕೆಗೆ ಬೇಕಾದ ಎಲ್ಲ ಸವಲತ್ತುಗಳನ್ನು ನೀಡಲು ಕೃಷಿ ಇಲಾಖೆ ಸನ್ನದ್ಧವಾಗಿದೆ, ಗೊಬ್ಬರ ಕೊರತೆ ಮತ್ತಿತರ ವದಂತಿಗಳಿಗೆ ರೈತರು ಕಿವಿಗೊಡಬಾರದು. ಯಾವುದೇ ಸಹಾಯ ಅಥವಾ ಮಾಹಿತಿ ಬೇಕಿದ್ದರೆ ಆಯಾ ತಾಲೂಕಿನ ಕೃಷಿ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಈಗಾಗಲೇ 9632 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು ಮತ್ತಷ್ಟು ಆಮದು ಮಾಡಿಕೊಳ್ಳಲಿದ್ದೇವೆ.
ಗಾಯತ್ರಿ, ಉಪನಿರ್ದೇಶಕಿ ಕೃಷಿ ಇಲಾಖೆ ಬೆಂ. ಗ್ರಾಮಾಂತರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net