

ಬೆಂಗಳೂರು: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ (ಯುಎಎಸ್-ಬಿ) ವ್ಯಾಪ್ತಿಯ ಮಂಡ್ಯದ ವಿ.ಸಿ.ಫಾರ್ಮ್ ಕೇಂದ್ರದಲ್ಲಿ ನಡೆಸುವ ಎರಡು ವರ್ಷದ ಡಿಪ್ಲೊಮಾ ಕೋರ್ಸ್‌ಗೆ 2024-25ನೇ ಶೈಕ್ಷಣಿಕ ವರ್ಷದ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಆಘಸ್ಟ್ 21ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ವಿವರಗಳಿಗೆ ಕುಲಸಚಿವರ ಕಚೇರಿ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-65 ಅಥವಾ ದೂರವಾಣಿ ಸಂಖ್ಯೆ 080-23330149 ಸಂಪರ್ಕಿಸಬಹುದು ಎಂದು ವಿವಿಯ ಕುಲಸಚಿವರು ತಿಳಿಸಿದ್ದಾರೆ.