ಕೃಷಿ ಸಾಲ ತೀರಿಸಲಾಗದೆ ಮಹಿಳೆ ಆತ್ಮಹತ್ಯೆ

lady Suside+1
Published on

ಬಂಕಾಪುರ: ಕೃಷಿಗಾಗಿ ಮಾಡಿದ ಸಾಲ ತೀರಿಸಲಾಗದೆ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿಗೆ ಸಮೀಪದ ಗುಡ್ಡದಚನ್ನಾಪುರ ಗ್ರಾಮದಲ್ಲಿ ನಡೆದಿದೆ.

ಗಿರಿಜವ್ವ ಗುತ್ತೆಪ್ಪ ಆಡಕಾಯವರ (47) ಮೃತ ಮಹಿಳೆ.

ಇವರು ಕೃಷಿಗಾಗಿ ಕೈಗಡವಾಗಿ ಮತ್ತು ಬ್ಯಾಂಕ್​ನಲ್ಲಿ 5.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬಂಕಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net