ಕೃಷಿ ಮಾರುಕಟ್ಟೆಗೆ ಮೂಲ ಸೌಕರ್ಯ

KUDGALI
ಕೂಡ್ಲಿಗಿ ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಸಕ ಡಾ.ಎನ್.ಟಿ.ಶ್ರೀನಿವಾಸ್, ತಹಸೀಲ್ದಾರ್ ಟಿ.ಜಗದೀಶ, ತಾಪಂ ಇಒ ವೈ.ರವಿಕುಮಾರ್, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ ಇತರರಿದ್ದರು.
Published on

ಕೂಡ್ಲಿಗಿ: ಅಸಂಖ್ಯಾತ ದೇಶ ಪ್ರೇಮಿಗಳ ತ್ಯಾಗ-ಬಲಿದಾನಗಳ ಮೂಲಕ ದೇಶವು ಸ್ವಾತಂತ್ರ್ಯವಾಗಿದೆ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.

ಪಟ್ಟಣದ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ಮಂಗಳವಾರ ತಾಲೂಕು ಆಡಳಿತದಿಂದ ಏರ್ಪಡಿಸಿದ್ದ 77 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜವಂದನೆ ಸ್ವೀಕರಿಸಿ ಮಾತನಾಡಿದರು.

ದೇಶವು ಇಂದು ಜಾಗತಿಕ ಮಟ್ಟದಲ್ಲಿ ಎಲ್ಲ ರಂಗಗಳಲ್ಲೂ ಮುಂಚೂಣಿಯಲ್ಲಿದ್ದು, ಚಂದ್ರನ ಅಂಗಳಕ್ಕೂ ಕಾಲಿಡುವ ಮೂಲಕ ಭಾರತೀಯರ ಪ್ರಬುದ್ಧತೆಯನ್ನು ವಿಶ್ವಕ್ಕೆ ತೋರಿಸಿದೆ. ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಜನರಿಗೆ ಹಲವು ಗ್ಯಾರಂಟಿಗಳನ್ನು ನೀಡಿ ಅವರಿಗೆ ನೆರವಾಗಿದೆ. ಕೂಡ್ಲಿಗಿ ವಿಧಾನ ಸಭೆ ಕ್ಷೇತ್ರವು ನಂಜುಡಪ್ಪ ವರದಿ ಪ್ರಕಾರ ಅತ್ಯಂತ ಹಿಂದುಳಿದಿದ್ದು, ಈಗಾಗಲೇ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮುಗಿಯುವ ಹಂತದಲ್ಲಿದೆ.

ಸಹಾಯ, ಸೌಲಭ್ಯ

ಶೀಘ್ರದಲ್ಲೇ ಅದನ್ನು ಲೋಕಾರ್ಪಣೆ ಮಾಡಿ ಈ ಭಾಗದ ರೈತರಿಗೆ ಅನುಕೂಲ ಕಲ್ಪಿಸಲಾಗುವುದು. ತಾಲೂಕಿನಲ್ಲಿ ಕೂಲಿ ಅರಸಿ ಅನೇಕರು ರಾಜ್ಯದ ನಾನಾ ಕಡೆ ಗುಳೇ ಹೋಗುತ್ತಿದ್ದು, ಅದನ್ನು ತಪ್ಪಿಸಲು ಗುಡಿ ಕೈಗಾರಿಕೆ ಹಾಗೂ ಸ್ವಯಂ ಉದ್ಯೋಗ ಕಲ್ಪಿಸಲು ಸರ್ಕಾರದ ಇಲಾಖೆಗಳ ಮೂಲಕ ಸಹಾಯ, ಸೌಲಭ್ಯ ಒದಗಿಸಲಾಗುವುದು. ರೈತರಿಗೆ ಕೃಷಿ ಮಾರುಕಟ್ಟೆಗೆ ಮೂಲ ಸೌಕರ್ಯಗಳನ್ನು ನೀಡಿ, ವ್ಯಾಪಾರ ವಹಿವಾಟು ನಡೆಸಲು ಕ್ರಮ ಕೈಗೊಳ್ಳಲು ಒತ್ತು ನೀಡಲಾಗುವುದು ಎಂದರು.

ಇದಕ್ಕೂ ಮುನ್ನ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕಕ್ಕೆ ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಪುಷ್ಪ ನಮನ ಸಲ್ಲಿಸಿದರು. ನಂತರ ಪೊಲೀಸ್, ಗೃಹರಕ್ಷಕ ದಳ ಸೇರಿ ನಾನಾ ಶಾಲೆಯ ವಿದ್ಯಾರ್ಥಿಗಳಿಂದ ಧ್ವಜವಂದನೆ ಸ್ವೀಕರಿಸಿದರು. ತಹಸೀಲ್ದಾರ್ ಟಿ.ಜಗದೀಶ, ತಾಪಂ ಇಒ ವೈ. ರವಿಕುಮಾರ್, ಡಿವೈಎಸ್ಪಿ ಮಲ್ಲೇಶಪ್ಪ ಮಲ್ಲಾಪುರ, ಸರ್ಕಾರಿ ನೌಕರ ಸಂಘದ ತಾಲೂಕು ಅಧ್ಯಕ್ಷ ಪಿ.ಶಿವರಾಜ, ಪಪಂ ಸದಸ್ಯರಾದ ಕಾವಲಿ ಶಿವಪ್ಪನಾಯಕ, ಚೌಡಮ್ಮ, ರೇಣುಕ ದುರುಗೇಶ, ಲಕ್ಷ್ಮೀದೇವಿ, ಸಚಿನ್ ಕುಮಾರ್, ಲೀಲಾವತಿ ಪ್ರಮುಖ ಪ್ರಭಾಕರ್, ಮುಖಂಡರಾದ ಹಿರೇಕುಂಬಳಗುಂಟೆ ಉಮೇಶ, ಡಿ.ಎಚ್.ದುರುಗೇಶ, ಎಚ್.ವೀರಭದ್ರಪ್ಪ, ಟಿ.ಜಿ.ಮಲ್ಲಿಕಾರ್ಜುನ ಗೌಡ, ಮಾದಿಹಳ್ಳಿ ನಜೀರ್, ಎಸ್.ದುರುಗೇಶ, ರಿಯಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net