ಕೃತಕ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್: ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ

IMG_3100
Published on

ಶಿವಮೊಗ್ಗ: ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚಾಗಿದ್ದು ಕೃಷಿ ಚಟುವಟಿಕೆಗೆ ಪೂರಕವಾಗಿದೆ. ಅದಕ್ಕೆ ತಕ್ಕಂತೆ ಕೃಷಿ ಇಲಾಖೆ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಮಾಡಿದೆ. ಯಾರಾದರೂ ಕೃತಕ ಅಭಾವ ಸೃಷ್ಟಿಸಿದರೆ ಮುಲಾಜಿಲ್ಲದೆ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು.

ಡಿಸಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಮುಂಗಾರು ಹಂಗಾಮಿನ ಪೂರ್ವಸಿದ್ಧತೆ ಕುರಿತು ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 153 ಲಕ್ಷ ಟನ್ ಆಹಾರ ಉತ್ಪಾದನೆಯಾಗಿದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಶೇ.10ರಷ್ಟು ಹೆಚ್ಚಾಗಿದೆ ಎಂದರು.

ರಾಜ್ಯದಲ್ಲಿ 142 ಮಿಮೀ ವಾಡಿಕೆ ಮಳೆಗೆ ಬದಲು ಇದುವರೆಗೆ 244 ಮಿಮೀ ಬಿದ್ದಿದೆ. 6,00,300 ಕ್ವಿಂಟಾಲ್ ಬಿತ್ತನೆ ಬೀಜ ಬೇಡಿಕೆ ಇದ್ದು 7,73,890 ಕ್ವಿಂ. ಲಭ್ಯವಿದೆ. ಈಗಾಗಲೇ ಅದರಲ್ಲಿ 78,522 ಕ್ವಿಂ. ವಿತರಿಸಲಾಗಿದೆ. ಇನ್ನೂ 1,62,014 ಕ್ವಿಂ. ದಾಸ್ತಾನು ಇದೆ ಎಂದು ಹೇಳಿದರು.

ಯೂರಿಯಾ 4,17,585 ಮೆಟ್ರಿಕ್ ಟನ್ ಬೇಡಿಕೆ ಇದ್ದು 2,66,570 ಮೆಟ್ರಿಕ್ ಟನ್ ಸರಬರಾಜು ಆಗಿದೆ. 4,56,540 ಮೆಟ್ರಿಕ್ ಟನ್ ದಾಸ್ತಾನಿದೆ. ಡಿಎಪಿ 2,61,590 ಮೆಟ್ರಿಕ್ ಟನ್ ಬೇಡಿಕೆ ಇದ್ದು 99,384 ಪೂರೈಕೆಯಾಗಿದೆ. 1,17,330 ಸಂಗ್ರಹವಿದೆ. ಪೋಟಾಷ್ 97,200 ಮೆಟ್ರಿಕ್ ಟನ್ ಬೇಡಿಕೆ ಇದೆ. 38,469 ಮೆಟ್ರಿಕ್ ಟನ್ ಸರಬರಾಜು ಆಗಿದೆ. 1,16,900 ಮೆಟ್ರಿಕ್ ಟನ್ ದಾಸ್ತಾನಿದೆ. ಕಾಂಪ್ಲೆಕ್ಸ್ 5,01,440 ಮೆಟ್ರಿಕ್ ಟನ್ ಬೇಡಿಕೆ ಇದ್ದು 2,71,746 ಮೆಟ್ರಿಕ್ ಟನ್ ಪೂರೈಕೆ ಆಗಿದೆ. 5,47,520 ಮೆಟ್ರಿಕ್ ಟನ್ ದಾಸ್ತಾನು ಇದೆ ಎಂದು ವಿವರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net