ರೈತರಿಗೆ ಉಪ ಕಸುಬುಗಳ ಮಾಹಿತಿ ನೀಡಿ

web 3
Published on

ಮೂಡಿಗೆರೆ: ರೈತರಿಗೆ ಸಮಗ್ರ ಕೃಷಿ ಪದ್ಧತಿ ಬಗ್ಗೆ ಮಾಹಿತಿ ನೀಡುವ ಜತೆಗೆ ಕುರಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಸಾಕಾಣಿಕೆ, ಅಣಬೆ ಬೇಸಾಯಗಳ ಬಗ್ಗೆ ವೈಜ್ಞಾನಿಕ ಮಾಹಿತಿ ನೀಡಿ ರೈತ ಮಹಿಳೆಯರ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ. ಮಂಜುನಾಥ್ ಕೆ. ನಾಯಕ್ ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ 32ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ರೈತರು ತಮ್ಮ ಉತ್ಪನ್ನಗಳಿಗೆ ಹಾಗೂ ತಮ್ಮ ಪ್ರದೇಶಗಳಿಗೆ ತಕ್ಕಂತೆ ರೈತ ಉತ್ಪಾದಕ ಕಂಪನಿಗಳನ್ನು ಸ್ಥಾಪಿಸಿ ಅವುಗಳ ಮೂಲಕ ಬೆಳೆಗಳನ್ನು ಮಾರಾಟ ಮಾಡಬಹುದು. ಕೃಷಿ ವಿಜ್ಞಾನ ಕೇಂದ್ರವು ಈ ಬಗ್ಗೆ ರೈತರಿಗೆ ಸೂಕ್ತ ಮಾಹಿತಿ ಒದಗಿಸಬೇಕು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net