ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗೆ ತಿದ್ದುಪಡಿ ಬೇಡ

14 Raibag 1-Web
ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಬಾಗ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಅಧ್ಯಕ್ಷ ರವಿ ಪಟೇಗಾರ, ಯಲ್ಲಪ್ಪ ನಾಯಿಕ, ಶಿವಾಜಿ ನಾಯಿಕ, ಪ್ರಕಾಶ ಪಾಟೀಲ ಇತರರು ಇದ್ದರು.
Published on

ರಾಯಬಾಗ: ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಯಬಾಗ ತಾಲೂಕು ಘಟಕದ ವತಿಯಿಂದ ತಹಸೀಲ್ದಾರ್ ಚಂದ್ರಕಾಂತ ಭಜಂತ್ರಿ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರವು ಒಪ್ಪಿಗೆ ನೀಡುವಂತೆ ಕೇಂದ್ರ ಸರ್ಕಾರ ಒತ್ತಡ ಹೇರಿ ಪತ್ರ ಬರೆದಿದೆ. ರಾಜ್ಯ ಸರ್ಕಾರ ಈ ಕಾಯ್ದೆ ತಿದ್ದುಪಡಿಗೆ ಒಪ್ಪಿಗೆ ಸೂಚಿಸಿದರೆ ರೈತರ ಬದುಕು ಅತಂತ್ರವಾಗುತ್ತದೆ. ಹೀಗಾಗಿ ಎಪಿಎಂಸಿ ಕಾಯ್ದೆ ತಿದ್ದುಪಡಿ ನಿರ್ಧಾರ ಕೈ ಬಿಡಬೇಕು ಎಂದು ರೈತರು ಮನವಿಯಲ್ಲಿ ಒತ್ತಾಯಿಸಿದ್ದಾರೆ. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ಅಧ್ಯಕ್ಷ ರವಿ ಪಟೇಗಾರ, ಯಲ್ಲಪ್ಪ ನಾಯಿಕ, ಶಿವಾಜಿ ನಾಯಿಕ, ಪ್ರಕಾಶ ಪಾಟೀಲ, ಬಸಲಿಂಗ ಗಡ್ಡೆ, ರಾಜು ಖೋತ, ಗಜು ಮುತಾರೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net