ಆ.31ರವರೆಗೆ ಆಗುಂಬೆಯಲ್ಲಿ ಘನವಾಹನ ಸಂಚಾರ ನಿಷೇಧ

udp-29-agumbe
Published on

ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯ 11 ನೇ ತಿರುವುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಜುಲೈ 30ರವರೆಗೆ ಸ್ಥಗಿತಗೊಳಿಸಿ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಲಾಗಿದ್ದು, ಪ್ರಸ್ತುತ ಕಾಮಗಾರಿ ಪೂರ್ಣಗೊಳ್ಳುವುದು ವಿಳಂಬವಾಗಿರುವುದರಿಂದ ಆ.31ರವರೆಗೆ ಲಘು ವಾಹನ ಹಾಗೂ ಬಸ್ ಸಂಚಾರ ಹೊರತು ಪಡಿಸಿ ಘನವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ಸಾರ್ವಜನಿಕರಿಂದ ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಲು ಕೋರಿಕೆ ಬರುತ್ತಿರುವುದರಿಂದ ಅನುಮತಿ ನೀಡಲಾಗಿದೆ. ಈಗಾಗಲೇ ಭೂಕುಸಿತದಿಂದಾಗಿ ರಸ್ತೆಯ ಬದಿಯಲ್ಲಿ ಬಿದ್ದು ಹೋಗಿದ್ದ ಗಾರ್ಡ್‌ವಾಲ್ ಮರು ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿದ್ದು ಸದ್ಯ ತಾತ್ಕಾಲಿಕ ದುರಸ್ಥಿ ಕಾರ್ಯ ಮುಂದುವರೆದಿದೆ. ದುರಸ್ತಿ ಸಂಪೂರ್ಣವಾಗಿ ಮುಗಿಯಲು ಎರಡು ವಾರಗಳ ಕಾಲಾವಧಿ ಬೇಕಾಗಿದ್ದು, ಪ್ರಸ್ತುತ ಆಗುಂಬೆ ಘಾಟಿಯಲ್ಲಿ ಅಗಾಗ್ಗೆ ಮಳೆ ಆಗುತ್ತಿದ್ದು ಮಳೆಯಿಂದ ಮತ್ತೆ ಭೂಕುಸಿತ ಉಂಟಾಗುವ ಸಾಧ್ಯತೆ ಇರುವುದರಿಂದ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net